ಭಾನುವಾರ, ಏಪ್ರಿಲ್ 11, 2021
30 °C

ಸವಣೂರ ಅನರ್ಹತೆಗೆ ಹೈಕೋರ್ಟ್ ತಡೆಯಾಜ್ಞೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ನೂರಾನಿ ಹಳೇ ಮೋಟಾರ್ಸ್‌ ಪಾರ್ಟ್ಸ್ ಡೀಲರ್ಸ್‌ ಕೋ-ಆಪ್ ಕ್ರೆಡಿಟ್ ಸೊಸೈಟಿ ಅಧ್ಯಕ್ಷ ಹುದ್ದೆಯಿಂದ ಮೊಹಮ್ಮದ್ ಯೂಸುಫ್ ಸವಣೂರ ಅವರನ್ನು ಅನರ್ಹಗೊಳಿಸಿ ಹೊರಡಿಸಿದ್ದ ಸಹಕಾರ ಸಂಘಗಳ ಸಹಾಯಕ ನಿಬಂಧಕರ ಆದೇಶಕ್ಕೆ ಸಂಚಾರಿ ಹೈಕೋರ್ಟ್ ಪೀಠ ತಡೆಯಾಜ್ಞೆ ನೀಡಿದೆ.ಸವಣೂರ ಅವರನ್ನು ಜೂನ್ 25ರಂದು ಸೊಸೈಟಿಯ ಅಧ್ಯಕ್ಷ ಹುದ್ದೆಯಿಂದ ಅನರ್ಹಗೊಳಿಸಲಾಗಿತ್ತು. ಸಂಘದ ಉಪಾಧ್ಯಕ್ಷ ಜಿ.ಕೆ. ಹೊಸಮನಿ ಇದೇ 28ರಂದು ಸೊಸೈಟಿಯ ಆಡಳಿತ ಮಂಡಳಿಯ ಸಭೆ ಕರೆದಿದ್ದರು. ಇದರ ವಿರುದ್ಧ ಸವಣೂರ ಅವರು ಹೈಕೋರ್ಟ್ ಸಂಚಾರಿ ಪೀಠದಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ಅಂಗೀಕರಿಸಿದ ಕೋರ್ಟ್ ಅನರ್ಹತೆ ಆದೇಶಕ್ಕೆ ತಡೆಯಾಜ್ಞೆ ನೀಡಿದೆ.ಸೊಸೈಟಿಯ ಅಧ್ಯಕ್ಷರಾಗಿ ಸವಣೂರ ಅವರೇ ಮುಂದುವರಿಯಲಿದ್ದು, ಸದಸ್ಯರು ತಮ್ಮ ದೈನಂದಿನ ಚಟುವಟಿಕೆಗಳನ್ನು ಅಧ್ಯಕ್ಷರಾದ ಸವಣೂರ ಅವರ ಮೂಲಕ ನಡೆಸಿಕೊಂಡು ಹೋಗತಕ್ಕದ್ದು. ಹುದ್ದೆಯಿಂದ ಅನರ್ಹಗೊಳಿಸಿದ ಪ್ರಕರಣದ ಬಗ್ಗೆ ಯಾವುದೇ ಸ್ಪಂದನೆ ನೀಡಬಾರದು ಎಂದು ಸೊಸೈಟಿಯ ಕಾರ್ಯದರ್ಶಿ ಎಂ.ಆರ್. ಶೇರದಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಪ್ರತಿಭಟನೆ ಇಂದು

ಹುಬ್ಬಳ್ಳಿ:
ಏಕರೂಪದ ಹಾಗೂ ಸಮಾನ ಶಿಕ್ಷಣ ನೀತಿ ಜಾರಿಗೊಳಿಸುವಂತೆ ಆಗ್ರಹಿಸಿ ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಆಶ್ರಯದಲ್ಲಿ ಬೆಳಿಗ್ಗೆ 11 ಗಂಟೆಗೆ ಮಿನಿವಿಧಾನಸೌಧದ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಪ್ರೊ. ಕೆ.ಎಸ್. ಕೌಜಲಗಿ ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.