ಸವಲತ್ತು ದುರ್ಬಳಕೆ: ವಿಷಾದ
ಕೆ.ಆರ್.ನಗರ: ‘ದುರ್ಬಲರಿಗಾಗಿ ಇರುವ ಸರ್ಕಾರದ ಸವಲತ್ತುಗಳು ಹಲವೆಡೆ ದುರುಪಯೋಗವಾಗುತ್ತಿವೆ’ ಎಂದು ಶಾಸಕ ಸಾ.ರಾ.ಮಹೇಶ್ ಶುಕ್ರವಾರ ವಿಷಾದ ವ್ಯಕ್ತಪಡಿಸಿದರು. ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಪಶು ಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆ, ಜಲಾನಯನ ಅಭಿವೃದ್ಧಿ ಇಲಾಖೆ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸರ್ಕಾರದ ಸವಲತ್ತುಗಳು ನೇರವಾಗಿ ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಕಟ್ಟುನಿಟ್ಟಾಗಿ ನೋಡಿಕೊಳ್ಳಲಾಗುತ್ತಿದೆ.
ಆದರೂ ದುರುಪಯೋಗ ಪಡಿಸಿಕೊಂಡರೆ ಅಂತಹ ಫಲಾನುಭವಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುತ್ತದೆ ಎಂದರು. ಸರ್ಕಾರ ಸಹಾಯಧನ ನೀಡುತ್ತಿರುವುದು ಸಾರ್ವಜನಿಕರು ಬೆವರು ಸುರಿಸಿದ ಹಣ, ಅದನ್ನು ದುರುಪಯೋಗ ಪಡಿಸಿಕೊಳ್ಳದೆ ಸದುಪಯೋಗ ಪಡಿಸಿಕೊಂಡು ಆರ್ಥಿಕವಾಗಿ ಮುಂದೆ ಬರುವಂತೆ ಕರೆ ನೀಡಿದರು. ಜಿಲ್ಲಾ ಪಂಚಾಯಿತಿ ಸದಸ್ಯೆ ಕಲ್ಪನಾ ಧನಂಜಯ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಹೇಮಾವತಿ, ಪಶು ಇಲಾಖೆ ಸಹಾಯಕ ನಿರ್ದೇಶಕ ಡಾ.ರಮೇಶ್, ಡಾ.ಷಡಾಕ್ಷರಿ, ಭಾರತೀಯ ಸ್ಟೇಟ್ ಬ್ಯಾಂಕ್ ವ್ಯವಸ್ಥಾಪಕ ನಂಜುಂಡಸ್ವಾಮಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ವಿಶೇಷ ಘಟಕದ ಯೋಜನೆಯಡಿಯಲ್ಲಿ ಪರಿಶಿಷ್ಟ ಅರ್ಹ 33 ಫಲಾನುಭವಿಗಳಿಗೆ ಹಸು ಖರೀದಿಸಲು ಮಂಜೂರಾತಿ ಪತ್ರ ವಿತರಣೆ ಮಾಡಲಾಯಿತು. ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಮಹದೇವಸ್ವಾಮಿ, ಜಿಲ್ಲಾ ಪಂಚಾಯಿತಿ ಸದಸ್ಯ ಸಿ.ಜೆ.ದ್ವಾರಕೀಶ್, ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜು, ಸ್ಟೇಟ್ ಬ್ಯಾಂಕ್ ವ್ಯವಸ್ಥಾಪಕ ಉಮೇಶ್, ಭೇರ್ಯ ಕಾವೇರಿ ಗ್ರಾಮೀಣ ಬ್ಯಾಂಕ್ ವ್ಯವಸ್ಥಾಪಕ ನಾಗೇಂದ್ರಪ್ಪ, ಜಲಾನಯನ ಅಭಿವೃದ್ಧಿ ಇಲಾಖೆ ಲೋಕೇಶ್, ತಾಲ್ಲೂಕು ಸಮಾಜ ಕಲ್ಯಾಣ ಅಧಿಕಾರಿ ನಾರಾಯಣ ಉಪಸ್ಥಿತರಿದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.