ಮಂಗಳವಾರ, ಮೇ 18, 2021
30 °C

ಸಹಕಾರಿ ತತ್ವದಿಂದ ತ್ವರಿತ ಪ್ರಗತಿ: ನಳಿನ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಂಟ್ವಾಳ: `ಸಹಕಾರ ತತ್ವದಡಿ ಹೆಜ್ಜೆಯನ್ನಿಟ್ಟಾಗ ಪ್ರತಿಯೊಂದು ಹಿಂದುಳಿದ ಸಮುದಾವೂ ಸಾಮಾಜಿಕ ಮತ್ತು ಆರ್ಥಿಕ ಗುಣಮಟ್ಟ ಹೆಚ್ಚಿಸಿಕೊಳ್ಳಲು ಸಾಧ್ಯ~ ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು.ತಾಲ್ಲೂಕಿನ ಬಿ.ಸಿ.ರೋಡ್‌ನಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದ `ಸವಿತಾ ಸೌಹಾರ್ದ ಸಹಕಾರಿ ಸಂಸ್ಥೆ~ಯನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು.ಸಂಸ್ಥೆ ಅಧ್ಯಕ್ಷ ವಿಶ್ವನಾಥ ಸಾಲಿಯಾನ್ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಬಿ.ರಮಾನಾಥ ರೈ ಭದ್ರತಾ ಕೋಶ ಉದ್ಘಾಟಿಸಿ ಮಾತನಾಡಿ, ಸವಿತಾ ಸಮುದಾಯವು ಶೈಕ್ಷಣಿಕ ಸಂಸ್ಥೆ ಸ್ಥಾಪಿಸಿ ಇತರ ಬಲಿಷ್ಟ ಸಮಾಜಕ್ಕೆ ಪೂರಕವಾಗಿ ಬೆಳೆಯಬೇಕು ಎಂದರು.ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಬಿ.ನಾಗರಾಜ ಶೆಟ್ಟಿ ಶೇರು ಪತ್ರ ಬಿಡುಗಡೆಗೊಳಿಸಿದರು. ರಾಜ್ಯ ಸೌಹಾರ್ದ ಸಹಕಾರಿ ಸಂಸ್ಥೆ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ಅವರು ಠೇವಣಿಪತ್ರ ಮತ್ತು ಸಹಕಾರಿ ಸಂಘಗಳ ಉಪನಿಬಂಧಕ ಪಿ.ಆರ್.ಪಳಂಗಪ್ಪ ಸಾಲಪತ್ರ ಹಾಗೂ ಬಂಟ್ವಾಳ ಭೂಭಿವೃದ್ಧಿ ಬ್ಯಾಂಕಿನ ಅಧ್ಯಕ್ಷ ಸುದರ್ಶನ್ ಜೈನ್ ಅವರು ಸವಿತಾ ಚಿಟ್ಸ್ ಬಿಡುಗಡೆಗೊಳಿಸಿದರು.ಡಿಸಿಸಿ ಬ್ಯಾಂಕಿನ ನಿವೃತ್ತ ಡಿಜಿಎಂ ಉಗ್ಗಪ್ಪ ಶೆಟ್ಟಿ, ಸವಿತಾ ಸಮಾಜ ಜಿಲ್ಲಾಧ್ಯಕ್ಷ ದಿನೇಶ ಎಲ್.ಬಂಗೇರ, ಭಂಡಾರಿ ಮಹಾಮಂಡಲ ಅಧ್ಯಕ್ಷ ಕಡಂದಲೆ ಸುರೇಶ ಭಂಡಾರಿ ಶುಭ ಹಾರೈಸಿದರು.ಉಡುಪಿ ಸವಿತಾ ಸಂಘದ ಜಿಲ್ಲಾಧ್ಯಕ್ಷ ಬನ್ನಂಜೆ ಗೋವಿಂದ ಭಂಡಾರಿ, ಜಿಲ್ಲಾ ಪರಿಯಾಳ ಸಮಾಜ ಸುಧಾರಕ ಸಂಘದ ಅಧ್ಯಕ್ಷ ರಮೇಶ ಬಂಗೇರ ಸೂಟರ್‌ಪೇಟೆ, ಉದ್ಯಮಿ ಎನ್.ಸುಲೇಮಾನ್ ನಾರ್ಶ, ರಾಬರ್ಟ್ ಡಿಸೋಜ, ಬಂಟ್ವಾಳ ಸವಿತಾ ಸಮಾಜ ಸಂಘದ ಅಧ್ಯಕ್ಷ ಸುರೇಶ ನಂದೊಟ್ಟು, ನಿರ್ದೇಶಕರಾದ ಹರೀಶ ಬಂಟ್ವಾಳ್, ಕೆ.ಎನ್.ಪ್ರಕಾಶ್ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.