ಶುಕ್ರವಾರ, ಏಪ್ರಿಲ್ 23, 2021
22 °C

ಸಹಕಾರ ಕ್ಷೇತ್ರಕ್ಕೆ ರಾಜಕೀಯ ಬೇಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೃಷ್ಣರಾಜಪೇಟೆ: ಸಹಕಾರ ಕ್ಷೇತ್ರದಲ್ಲಿ ರಾಜಕೀಯದ ಪ್ರವೇಶವಾಗಿರುವ ಕಾರಣ ಸಹಕಾರಿ ಸಂಸ್ಥೆಗಳು ನಷ್ಟ ಅನುಭವಿಸುತ್ತ ದುಸ್ಥಿತಿ ತಲುಪುತ್ತಿವೆ ಎಂದು ಶಾಸಕ ಕೆ.ಬಿ.ಚಂದ್ರಶೇಖರ ಅಭಿಪ್ರಾಯಪಟ್ಟರು.ಪಟ್ಟಣದ ಟಿಎಪಿಸಿಎಂಎಸ್ ವತಿಯಿಂದ ಎಸ್.ಎಂ.ಲಿಂಗಪ್ಪ ಸಹಕಾರ ಭವನದಲ್ಲಿ ಬುಧವಾರ ನಡೆದ 59ನೇ ಅಖಿಲ ಭಾರತ ಸಹಕಾರ ಸಪ್ತಾಹ ಮತ್ತು ಅಂತರರಾಷ್ಟ್ರೀಯ ಸಹಕಾರ ವರ್ಷಾಚರಣೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಮನುಷ್ಯರಲ್ಲಿ ಪರಸ್ಪರ ಸಹಕಾರ ಭಾವನೆ ಉಳಿಯದೇ ಹೋದರೆ ಸಾಮಾಜಿಕ ಸ್ವಾಸ್ಥ್ಯ ಕೆಡುತ್ತದೆ. ಸಹಕಾರಿ ಮನೋಭಾವನೆಯಿಂದ ಎಂತಹ ಕಠಿಣ ಕಾರ್ಯವನ್ನೂ ಸಾಧಿಸಲು ಸಾಧ್ಯವಾಗುತ್ತದೆ ಎಂದರು.ಮಂಡ್ಯ ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ಎಂ.ಬಿ.ಹರೀಶ್ ಕಾರ್ಯಕ್ರಮ ಉದ್ಘಾಟಿಸಿದರು. ಸಹಕಾರಿ ಸಂಸ್ಥೆಗಳ ಅಳಿವು - ಉಳಿವು ಅಲ್ಲಿನ ಶೇರುದಾರರು, ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗದವರ ಮೇಲೆ ನಿಂತಿದ್ದು, ಇವರೆಲ್ಲರ ಪ್ರಾಮಾಣಿಕ ಪ್ರಯತ್ನದಿಂದ ಮಾತ್ರ ಸಹಕಾರಿ ವ್ಯವಸ್ಥೆಯ ಅಭಿವೃದ್ಧಿ ಸಾಧ್ಯ ಎಂದರು.ಮಂಡ್ಯ ಜಿಲ್ಲಾ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸತೀಶ್ ಸಹಕಾರ ಧ್ವಜಾರೋಹಣ ನೆರವೇರಿಸಿದರು. ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಕೆ.ಜಿ.ತಮ್ಮಣ್ಣ, ಜಿಲ್ಲಾ ಮಾರಾಟ ಸಹಕಾರ ಸಂಘಗಳ ಒಕ್ಕೂಟದ ಅಧ್ಯಕ್ಷ ಜೈನಹಳ್ಳಿ ರಾಮಕೃಷ್ಣೇಗೌಡ, ಭಾರತ ಆಹಾರ ನಿಗಮದ ಪ್ರಾದೇಶಿಕ ನಿರ್ದೇಶಕ ಎಂ.ಡಿ.ಕೃಷ್ಣಮೂರ್ತಿ, ಎಂಡಿಸಿಸಿ ಬ್ಯಾಂಕ್ ನಿರ್ದೇಶಕರಾದ ವಿ.ಡಿ.ಹರೀಶ್, ತೋಟಪ್ಪಶೆಟ್ಟಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಆರ್.ಕೆ.ಕುಮಾರ್, ಮಾಜಿ ಉಪಾಧ್ಯಕ್ಷರಾದ ಪಾಪೇಗೌಡ, ಎಸ್.ಅಂಬರೀಶ್, ಟಿಎಪಿಸಿಎಂಎಸ್ ಅಧ್ಯಕ್ಷ ಗಿರಿಗೌಡ, ಮಾಜಿ ಅಧ್ಯಕ್ಷರಾದ ಬಿ.ಎಲ್.ದೇವರಾಜು, ಎಚ್.ಕೃಷ್ಣೇಗೌಡ, ಎ.ಬಿ.ಜವರಪ್ಪ, ರಾಜ್ಯ ಸಹಕಾರ ಮಹಾಮಂಡಳದ ನಿವೃತ್ತ ನಿರ್ದೇಶಕ ಗೋವಿಂದೇಗೌಡ, ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ರಾಮಕೃಷ್ಣೇಗೌಡ  ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.