ಮೈಸೂರು: ಪ್ರತಿಯೊಂದಕ್ಕೂ ಸರ್ಕಾರವನ್ನು ಅವಲಂಬಿಸು ವುದನ್ನು ಬಿಟ್ಟು, ಸಹಕಾರ ತತ್ವಗಳನ್ನು ಪಾಲಿಸುವ ಮೂಲಕ ಸ್ವಾವಲಂಬನೆ ಸಾಧಿಸಬೇಕು ಎಂದು ಉಪಮುಖ್ಯಮಂತ್ರಿ ಆರ್.ಅಶೋಕ ಸಲಹೆ ನೀಡಿದರು.

ನಗರದ ಕಲಾಮಂದಿರದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬುಧವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ 59ನೇ ಅಖಿಲ ಭಾರತ ಸಹಕಾರ ಸಪ್ತಾಹಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕರ್ನಾಟಕದಲ್ಲಿ ಸರ್ಕಾರಿ ಬಸ್ ಸೇವೆ ಏಕಸ್ವಾಮ್ಯತೆ ಸಾಧಿಸಬೇಕು ಎಂಬ ಗುರಿ ಇತ್ತು. ಆದರೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ಬಸ್ ಚಾಲಕರು ಹಾಗೂ ನಿರ್ವಾಹಕರು ಸ್ಥಾಪಿಸಿದ `ಸಹಕಾರ ಸಾರಿಗೆ~ ಸರ್ಕಾರದ ಕಣ್ಣು ತೆರೆಸಿತು. ಸಹಕಾರ ತತ್ವಗಳನ್ನು ಅಳವಡಿಸಿಕೊಂಡರೆ ಎಲ್ಲ ರಂಗಗಳಲ್ಲೂ ಅಭಿವೃದ್ಧಿ ಸಾಧಿಸಲು ಸಾಧ್ಯವಿದೆ. ವಿಶ್ವದಲ್ಲಿ ಸಹಕಾರ ಕ್ಷೇತ್ರದಲ್ಲಿ ಭಾರತ ವ್ಯಾಪಕವಾಗಿ ಬೆಳೆದಿದೆ. ದೇಶದಲ್ಲಿ 5.87 ಲಕ್ಷ ಸಹಕಾರಿ ಸಂಘಗಳಿದ್ದು, 24 ಕೋಟಿ ಜನ ಇದರ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ಹೇಳಿದರು.

ಸಿದ್ದನಗೌಡ ಸಣ್ಣರಾಮಣ್ಣ ಪಾಟೀಲ್ ಅವರು 107 ವರ್ಷಗಳ ಹಿಂದೆಯೇ ಕರ್ನಾಟಕದಲ್ಲಿ ಸಹಕಾರ ಸಂಘ ಸ್ಥಾಪಿಸಿದರು. ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಸಹಕಾರ ಕ್ಷೇತ್ರದ ಬೆಳವಣಿಗೆಗೆ ಸಾಕಷ್ಟು ಸಹಕರಿಸಿದೆ. ಶೂನ್ಯ ಬಡ್ಡಿ ದರದಲ್ಲಿ ರೈತರಿಗೆ ಸಾಲ ನೀಡಿದೆ. ಹಾಲು ಉತ್ಪಾದಕರಿಗೆ 2 ರೂಪಾಯಿ ಸಹಾಯ ಧನ ನೀಡಿದೆ. ಆದರೂ ಬಡವರು ಮತ್ತು ಶೋಷಿತರನ್ನು ಸಹಕಾರ ಸಂಸ್ಥೆಗಳು ತಲುಪಬೇಕು ಎಂದರು.

ಸಹಕಾರ ಸಚಿವ ಬಿ.ಜೆ.ಪುಟ್ಟಸ್ವಾಮಿ ಮಾತನಾಡಿ, ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರೈತರ ಸಾಲ ಮನ್ನಾ ಮಾಡಿದೆ. ಆದರೆ ಸರ್ಕಾರ ಡಿಸಿಸಿ ಬ್ಯಾಂಕ್ಗಳಿಗೆ ಹಣ ಪಾವತಿ ಮಾಡುತ್ತಿಲ್ಲ ಎಂದು ವಿರೋಧ ಪಕ್ಷಗಳು ಅಪಪ್ರಚಾರ ಮಾಡುತ್ತಿವೆ. ಆಗಸ್ಟ್, ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳ ಬಾಕಿ ಹಣವನ್ನು ಈ ತಿಂಗಳ 10ರ ಒಳಗೆ ಪಾವತಿ ಮಾಡಲಾಗಿದೆ. ಪ್ರತಿ ತಿಂಗಳು ಬಿಲ್ ನೀಡಿ ದರೆ ನಿರ್ದಿಷ್ಟ ಹಣವನ್ನು ಸರ್ಕಾರ ಸಂದಾಯ ಮಾಡುತ್ತದೆ. ಈ ವಿಚಾರದಲ್ಲಿ ಗೊಂದಲ ಸೃಷ್ಟಿಸುವ ಅಗತ್ಯವಿಲ್ಲ ಎಂದರು.

ರಾಜ್ಯದಲ್ಲಿ 36 ಸಾವಿರಕ್ಕೂ ಅಧಿಕ ಸಹಕಾರಿ ಸಂಸ್ಥೆ ಗಳಿದ್ದು, 2.64 ಕೋಟಿ ಸದಸ್ಯರಿದ್ದಾರೆ. ಈ ಪೈಕಿ 3,223 ಸಂಸ್ಥೆಗಳು ಮಾತ್ರ ಸಕ್ರಿಯವಾಗಿವೆ. ಸಹಕಾರ ಸಂಘಗಳ ಸದಸ್ಯರೇ ವಿವಿಧ ಯೋಜನೆಗಳ ಫಲಾನುಭವಿಗಳಾಗು ತ್ತಿದ್ದಾರೆ ಎಂಬುದು ಸರ್ಕಾರದ ಗಮನಕ್ಕೆ ಬಂದಿದೆ. ಹಾಗಾಗಿ ಶೇ 25 ರಷ್ಟು ಸಾಲವನ್ನು ಕಡ್ಡಾಯವಾಗಿ ನೂತನ ಸದಸ್ಯ ರಿಗೆ ನೀಡಬೇಕು ಎಂಬ ನೀತಿಯನ್ನು ರಚಿಸುವ ಚಿಂತನೆ ಇದೆ. ಭೂ ರಹಿತರು, ನಿರುದ್ಯೋಗಿಗಳಿಗೂ ಸಾಲ ನೀಡುವ ವ್ಯವಸ್ಥೆ ಜಾರಿಗೊಳಿಸಲಾಗುವುದು ಎಂದು ಭರವಸೆ ನೀಡಿದರು.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವುದಕ್ಕೂ ಮುನ್ನ ಕೇವಲ 21 ಸಾವಿರ ಲೀಟರ್ ಹಾಲು ಉತ್ಪಾದನೆಯಾಗುತ್ತಿತ್ತು. ಹಾಲಿನ ದರವನ್ನು ರೂ.8 ರಿಂದ 22ಕ್ಕೆ ಹೆಚ್ಚಿಸಿದ ಪರಿಣಾಮವಾಗಿ ಈಗ 54 ಸಾವಿರ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ಕಡಿಮೆ ಬಡ್ಡಿ ದರದಲ್ಲಿ ಹಸು, ಎಮ್ಮೆ ಖರೀದಿಗೆ ಸಾಲ ನೀಡಲಾಗುತ್ತಿದೆ. ಸಣ್ಣ, ಅತಿ ಸಣ್ಣ ರೈತರ ಜೀವನಾಧಾರಕ್ಕೆ ಸಹಾಯ ಧನ ವಿತರಿಸಲಾಗುತ್ತಿದೆ ಎಂದರು.

ವಸತಿ ಸಚಿವ ವಿ.ಸೋಮಣ್ಣ, ವೈದ್ಯಕೀಯ ಶಿಕ್ಷಣ ಸಚಿವ ಎಸ್.ಎ.ರಾಮದಾಸ್, ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳದ ಅಧ್ಯಕ್ಷ ಜಿ.ಟಿ.ದೇವೇಗೌಡ, ಮಾಜಿ ಸಚಿವ ಎಚ್.ಕೆ.ಪಾಟೀಲ್, ಶಾಸಕರಾದ ಸಾ.ರಾ.ಮಹೇಶ್, ಸಿದ್ದರಾಜು, ಮರಿತಿಬ್ಬೇಗೌಡ, ಮುಡಾ ಅಧ್ಯಕ್ಷ ಎಲ್.ನಾಗೇಂದ್ರ, ಅರಗು ಮತ್ತು ಬಣ್ಣದ ಪ್ರಾಧಿಕಾರದ ಅಧ್ಯಕ್ಷ ಮೈ.ವಿ.ರವಿಶಂಕರ್, ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಬಿ.ಪಿ.ಮಂಜುನಾಥ್, ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಎಚ್.ವಿ.ರಾಜೀವ್, ಕರ್ನಾಟಕ ರಾಜ್ಯ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಎ.ಆರ್. ಶಿವರಾಂ, ಲ್ಯಾಂಪ್ಸ್ ಮಹಾಮಂಡಳದ ಅಧ್ಯಕ್ಷ ಎಂ.ಕೃಷ್ಣಯ್ಯ, ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ ಸಿ.ಬಸವೇಗೌಡ, ಮೈಮುಲ್ ಅಧ್ಯಕ್ಷ ಎನ್.ಮಹದೇವಪ್ಪ, ಮಾಜಿ ಮೇಯರ್ ವಾಸು, ರಾಜ್ಯ ಮೀನುಗಾರರ ಸಹಕಾರ ಸಂಘದ ಅಧ್ಯಕ್ಷ ಎಸ್. ಮಾದೇಗೌಡ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.