ಶುಕ್ರವಾರ, ಮೇ 14, 2021
21 °C

ಸಹಕಾರ ಬ್ಯಾಂಕ್: ಮರು ಚುನಾವಣಾ ಪ್ರಕ್ರಿಯೆಗೆ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬೆಂಗಳೂರು ಸಿಟಿ ಕೋ-ಆಪರೇಟಿವ್ ಬ್ಯಾಂಕ್‌ನ ಆಡಳಿತ ಮಂಡಳಿಗೆ ಹೊಸದಾಗಿ ಚುನಾವಣೆ ಪ್ರಕ್ರಿಯೆ ನಡೆಸುವಂತೆ ಜಂಟಿ ನಿಬಂಧಕರ ನ್ಯಾಯಾಲಯವು ಬುಧವಾರ ಸೂಚನೆ ನೀಡಿದೆ.2010ರ ಮಾರ್ಚ್ 14ರಂದು ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಲೋಪಗಳಾಗಿವೆ ಎಂದು ಆರೋಪಿಸಿ ಬ್ಯಾಂಕ್ ಸದಸ್ಯ ಎಂ. ವೆಂಕಟೇಶ್ ಅವರು ನ್ಯಾಯಾಲಯದ ಮೊರೆ ಹೋಗಿದ್ದರು. ಸಹಕಾರ ಸಂಘಗಳ ಕಾಯ್ದೆ ಮತ್ತು ನಿಯಮಗಳ ಪ್ರಕಾರ ನಾಮಪತ್ರ ಸಲ್ಲಿಕೆಗೆ ಏಳು ದಿನಗಳ ಗಡುವು ನೀಡಬೇಕು. ಆದರೆ ಚುನಾವಣಾಧಿಕಾರಿಗಳು ನಾಮಪತ್ರ ಸಲ್ಲಿಕೆ ಗಡುವನ್ನು ಕಡಿತಗೊಳಿಸಿದ್ದರು ಎಂಬುದನ್ನು ಅವರು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ಜಂಟಿ ನಿಬಂಧಕರ ನ್ಯಾಯಾಲಯವು, ಆಡಳಿತ ಮಂಡಳಿಗೆ ಹೊಸದಾಗಿ ಚುನಾವಣೆ ಪ್ರಕ್ರಿಯೆ ನಡೆಸಲು ಕೂಡಲೇ ಚುನಾವಣಾ ನಿರ್ವಚನಾಧಿಕಾರಿಯನ್ನು ನೇಮಿಸಿ ಕಾನೂನುಬದ್ಧವಾಗಿ ಚುನಾವಣೆ ನಡೆಸಬೇಕು ಎಂದು ಸೂಚಿಸಲಾಗಿದೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.