ಶುಕ್ರವಾರ, ಏಪ್ರಿಲ್ 23, 2021
31 °C

ಸಹಕಾರ ಸಂಘಗಳಲ್ಲಿ ಅವ್ಯವಹಾರ: ಚರ್ಚೆಗೆ ಅವಕಾಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿನ ವಿವಿಧ ಸಹಕಾರ ಸಂಘಗಳಲ್ಲಿ ಹಣ ದುರುಪಯೋಗ, ಅಧಿಕಾರ ದುರ್ಬಳಕೆ ಆಗಿದೆ ಎಂದು ಸಹಕಾರ ಸಚಿವ ಬಿ.ಜೆ.ಪುಟ್ಟಸ್ವಾಮಿ ಮಾಡಿರುವ ಆರೋಪದ ಬಗ್ಗೆ ನಿಯಮ 69ರ ಅಡಿ  ಚರ್ಚಿಸಲು ಅವಕಾಶ ನೀಡಿರುವುದಾಗಿ ವಿಧಾನ ಸಭಾಧ್ಯಕ್ಷ ಕೆ.ಜಿ.ಬೋಪಯ್ಯ ಪ್ರಕಟಿಸಿದರು.ವಿಧಾನ ಸಭೆಯಲ್ಲಿ ಶುಕ್ರವಾರ ಜೆಡಿಎಸ್‌ನ ವೆಂಕಟರಾವ್ ನಾಡಗೌಡ ಅವರು ಈ ಬಗ್ಗೆ ನಿಲುವಳಿ ಸೂಚನೆಯಡಿ ಚರ್ಚಿಸಲು ಅವಕಾಶ ನೀಡಬೇಕು ಎಂದು ಮಾಡಿದ ಮನವಿಯನ್ನು ತಿರಸ್ಕರಿಸಿದ ಬೋಪಯ್ಯ, ಈ ವಿಷಯ ನಿಲುವಳಿ ಸೂಚನೆಯಡಿ ಬರುವುದಿಲ್ಲ. ಇದನ್ನು ಪರಿವರ್ತನೆ ಮಾಡಿ ನಿಯಮ 69ರ ಅಡಿ ಚರ್ಚೆಗೆ ತೆಗೆದುಕೊಳ್ಳುವುದಾಗಿ ಹೇಳಿದರು.ಸದನ ನಡೆಯುವಾಗ, ಸದನದ ಹೊರಗಡೆ ಸಹಕಾರಿ ಸಚಿವರೇ ಈ ರೀತಿ ಹೇಳಿರುವುದು ಸರಿಯಲ್ಲ, ಇದರಿಂದ ಜನರಲ್ಲಿ ತಪ್ಪು ಭಾವನೆ ಮೂಡುತ್ತದೆ. ಸತ್ಯಾಸತ್ಯತೆ ತಿಳಿಯಲು ಈ ಬಗ್ಗೆ ಚರ್ಚೆಯಾಗಬೇಕು ಎಂದು ನಾಡಗೌಡ ಹೇಳಿದರು. `ಒಂದು ಲಕ್ಷ ಜನರಿಗೆ ಸಿಗಬೇಕಾದ ಸವಲತ್ತುಗಳು ಒಬ್ಬ ವ್ಯಕ್ತಿಗೆ ದೊರೆತಿವೆ. ಈ ಬಗ್ಗೆ ನನ್ನ ಬಳಿ ದಾಖಲೆಗಳಿವೆ ಎಂದು ಪುಟ್ಟಸ್ವಾಮಿ ಹೇಳಿದ್ದಾರೆ. ಈ ಬಗ್ಗೆ ಚರ್ಚೆಯಾಗಬೇಕು~ ಎಂದು ಜೆಡಿಎಸ್‌ನ ಎಚ್.ಡಿ.ರೇವಣ್ಣ ಒತ್ತಾಯಿಸಿದರು.`ನಾನು ನಿರ್ದಿಷ್ಟವಾಗಿ ಯಾವ ಸಂಘದ ವಿರುದ್ಧವೂ ಆರೋಪ ಮಾಡಿಲ್ಲ. ಅವ್ಯವಹಾರ ಆಗಿದ್ದರೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದೇನೆ~ ಎಂದು ಪುಟ್ಟಸ್ವಾಮಿ ಹೇಳಿದರು.

  ಅ.2ರವರೆಗೆ ಅಧಿವೇಶನ

ವಿಧಾನಮಂಡಲ ಅಧಿವೇಶನವನ್ನು ಹೆಚ್ಚುವರಿ ಯಾಗಿ ಇನ್ನೂ ಮೂರು ದಿನ ನಡೆಸಲು ಕಾರ್ಯ ಕಲಾಪಗಳ ಸಲಹಾ ಸಮಿತಿಯ ಸಭೆಯಲ್ಲಿ ನಿರ್ಧರಿಸಲಾಗಿದೆ.ಈ ಸಮಿತಿ ಗುರುವಾರ ಸಭೆ ಸೇರಿದಾಗ ಪ್ರತಿಪಕ್ಷಗಳ ಮುಖಂಡರು ಅಧಿವೇಶನದ ಅವಧಿಯನ್ನು ವಿಸ್ತರಿಸಬೇಕು ಎಂದು ಕೋರಿದ್ದರು.ಈ ಕಾರಣಕ್ಕೆ ಇದೇ 30ರವರೆಗೆ ನಡೆಯಬೇಕಿದ್ದ ಅಧಿವೇಶನವನ್ನು ಆಗಸ್ಟ್ 2ರವರೆಗೆ ನಡೆಸಲು ನಿರ್ಧರಿಸಲಾಗಿದೆ ಎಂದು ಸ್ಪೀಕರ್‌ಕೆ.ಜಿ.ಬೋಪಯ್ಯ ವಿಧಾನಸಭೆಗೆ ತಿಳಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.