ಮೈಸೂರು: ಆದಿವಾಸಿ ಜನಾಂಗಗಳ ಸುಧಾರಣೆ ಸಹಕಾರ ಸಂಘದಿಂದ ಮಾತ್ರ ಸಾಧ್ಯ ಎಂದು ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಎಚ್.ವಿ. ರಾಜೀವ್ ಅಭಿಪ್ರಾಯ ಪಟ್ಟರು.

ಬೆಂಗಳೂರಿನ ರಾಜ್ಯ ಸಹಕಾರ ಮಹಾಮಂಡಳ, ರಾಜ್ಯ ಲ್ಯಾಂಪ್ಸ್ ಸಹಕಾರ ಮಹಾಮಂಡಳ ಹಾಗೂ ಜಿಲ್ಲಾ ಸಹಕಾರ ಒಕ್ಕೂಟದ ಆಶ್ರಯ ದಲ್ಲಿ ಜಿಲ್ಲಾ ಸಹಕಾರ ಯೂನಿಯನ್ ಸಭಾಂಗಣದಲ್ಲಿ ಬುಧವಾರ ನಡೆದ ಲ್ಯಾಂಪ್ಸ್ ಸಹಕಾರ ಸಂಘಗಳ ಸದಸ್ಯರ ಒಂದು ದಿನದ ವಿಶೇಷ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಹಕಾರ ತತ್ವದಲ್ಲಿ ಸರ್ವರೂ ಸಮಾನರು. ಗುಂಪುಗಾರಿಕೆಗೆ ಇಲ್ಲಿ ಅವಕಾಶ ಇಲ್ಲದಿರುವುದರಿಂದ ಸದಸ್ಯರು ತಮ್ಮ ಹಕ್ಕುಗಳನ್ನು ಕುರಿತು ಪ್ರಶ್ನೆ ಮಾಡಬಹುದು. ಈ ಮೊದಲು ಸಂಘಗಳ ಅಧ್ಯಕ್ಷರು, ಆಡಳಿತ ಮಂಡಳಿಯ ಸದಸ್ಯರಿಗೆ ಮಾತ್ರ ತರಬೇತಿ ನೀಡಲಾಗುತ್ತಿತ್ತು. ಪ್ರಸ್ತುತ ರಾಜ್ಯದಲ್ಲೇ ಮೊದಲ ಬಾರಿಗೆ ಸಂಘದ ಸದಸ್ಯರಿಗೂ ಅರಣ್ಯ ಕಾಯಿದೆ ಮತ್ತು ಸಹಕಾರಿ ಸಂಘಗಳ ಬಗ್ಗೆ ಅರಿವು ಮೂಡಿಸಲು ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳ ಲಾಗಿದೆ ಎಂದರು.

ರಾಜ್ಯ ಲ್ಯಾಂಪ್ಸ್ ಸಹಕಾರ ಮಹಾಮಂಡಳ ನಿಗಮದ ಅಧ್ಯಕ್ಷ ಎಂ. ಕೃಷ್ಣಯ್ಯ ಮಾತನಾಡಿ, ಸಹಕಾರಿ ಸಂಘಗಳನ್ನು ಬಲಿಷ್ಠವನ್ನಾಗಿ ಮಾಡಲು ಸದಸ್ಯರಿಗೆ ಪೂರ್ಣ ಪ್ರಮಾಣದ ಅರಿವು ಮೂಡಿಸಬೇಕು. ಇಂತಹ ತರಬೇತಿ ಕಾರ್ಯಕ್ರಮಗಳನ್ನು ಏರ್ಪಡಿಸುವ ಮೂಲಕ ಆದಿವಾಸಿಗಳ ಆರ್ಥಿಕ, ಸಾಮಾಜಿಕ, ರಾಜಕೀಯ ಸ್ಥಾನಮಾನ ದಲ್ಲಿ ಸುಧಾರಣೆ ತರುವಂತೆ ಮಾಡ ಬಹುದು. ಇದರಿಂದ ಅವರ ನಾಗರಿಕತೆಯೂ ಉತ್ತಮಗೊಳ್ಳುತ್ತದೆ ಎಂದು ಹೇಳಿದರು.

ತಮ್ಮ ಬದುಕಿಗಾಗಿ ಅರಣ್ಯ ಉತ್ಪನ್ನಗಳನ್ನೇ ಅವಲಂಬಿಸಿರುವ ಆದಿವಾಸಿಗಳ ಮತ್ತು ಪಾರಂಪರಿಕ ಅರಣ್ಯವಾಸಿಗಳ ಹಕ್ಕುಗಳನ್ನು ಅರಣ್ಯ ಇಲಾಖೆಯವರು ದುರುಪಯೋಗ ಮಾಡುತ್ತಿದ್ದಾರೆ ಎಂದ ಅವರು ಅರಣ್ಯ ಕಾಯಿದೆ ಕುರಿತು ತಿಳಿವಳಿಕೆ ನೀಡಿದರು.

ರಾಜ್ಯ ಲ್ಯಾಂಪ್ಸ್ ಸಹಕಾರ ಮಹಾ ಮಂಡಳ ನಿಗಮದ ವ್ಯವಸ್ಥಾಪಕ ನಿರ್ದೇಶಕ ಎಸ್.ಎಸ್. ಮಹೇಂದ್ರ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಗಿರಿಜನರ ಕಲ್ಯಾಣ ಮತ್ತು ಅಭಿವೃದ್ಧಿಗಾಗಿ ಸರ್ಕಾರ ನೀಡಿರುವ ಸವಲತ್ತು, ರೂಪಿಸಿರುವ ನಿಯಮಗಳು, ಆಡಳಿತ ಮಂಡಳಿ, ಸರ್ವ ಸದಸ್ಯರ ಸಭೆಗಳ ಬಗ್ಗೆ ಅರಿವು ಮೂಡಿಸಿದರು.

ಸಹಕಾರ ಅಭಿವೃದ್ಧಿ ಅಧಿಕಾರಿ ಈರಯ್ಯ, ಸಿಇಓ ಕೆ.ಮಲ್ಲಯ್ಯ, ಉಪಾಧ್ಯಕ್ಷ ಹನುಮನಾಳು ಸಿದ್ದೇಗೌಡ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.