ಮುಳಬಾಗಲು: ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ರಾಜಕೀಯ ಸಲ್ಲದು ಎಂದು ಮಾಜಿ ಸಚಿವ ಅಲಂಗೂರು ಶ್ರೀನಿವಾಸ್ ಮನವಿ ಮಾಡಿದರು.
ತಾಲ್ಲೂಕಿನ ಶಿವನಾರಹಳ್ಳಿ ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಶನಿವಾರ ಚಾಲನೆ ನೀಡಿ ಮಾತನಾಡಿದ ಅವರು, ಖಾಸಗಿ ಡೇರಿಗಳನ್ನು ಸರ್ಕಾರ ನಿಯಂತ್ರಿಸಬೇಕು ಎಂದು ಒತ್ತಾಯಿಸಿದರು.

ಕೋಮುಲ್ ನಿರ್ದೇಶಕ ಕಾಡೇನಹಳ್ಳಿ ನಾಗರಾಜ್ ಮಾತನಾಡಿ, ತಾಲ್ಲೂಕಿನ ಎಲ್ಲಾ ಗ್ರಾಮಗಳಲ್ಲೂ ಹಾಲು ಸಹಕಾರ ಸಂಘಗಳನ್ನು ಪ್ರಾರಂಭಿಸಲು ಚಿಂತನೆ ನಡೆದಿದೆ. ಪ್ರತಿದಿನ ನೂರು ಲೀಟರ್ಗಿಂತಲೂ ಹೆಚ್ಚು ಹಾಲು ಸಂಗ್ರಹಿಸಬೇಕು ಹಾಗೂ ಹಾಲಿನ ಗುಣಮಟ್ಟ ಕಾಪಾಡಿಕೊಳ್ಳಬೇಕು. ಜವಾಬ್ದಾರಿಯುತ ಸಂಘಗಳಿಗೆ ಕಟ್ಟಡ ನಿರ್ಮಾಣಕ್ಕೆ ಅನುದಾನ ನೀಡಲಾಗುವುದು ಎಂದರು.

ತಾ.ಪಂ. ಮಾಜಿ ಅಧ್ಯಕ್ಷೆ ರಘುಪತಿರೆಡ್ಡಿ, ಮಾಜಿ ಸದಸ್ಯ ವೈ.ಎಂ.ರೆಡ್ಡಿ, ಜೆಡಿಎಸ್ ಮುಖಂಡ ಮುನಿಆಂಜಪ್ಪ, ಡಾ.ಪುಣ್ಯಕೋಟಿ ಮಾತನಾಡಿದರು. ಗ್ರಾಮದ ಮುಖಂಡರಾದ ಚಲಪತಿ, ನಾರಾಯಣಸ್ವಾಮಿ, ವೆಂಕಟೇಶಪ್ಪ, ಮಂಜುನಾಥ್, ಬಾಬು ಇದ್ದರು. ಮಾರ್ಕಂಡಪ್ಪ ಸ್ವಾಗತಿಸಿದರು. ಶ್ರೀನಿವಾಸಗೌಡ ವಂದಿಸಿದರು. ಶ್ರೀಧರಮೂರ್ತಿ ಕಾರ್ಯಕ್ರಮ ನಿರೂಪಿಸಿದರು.

ಬಸವರಾಜಪುರ: ತಾಲ್ಲೂಕಿನ ತಾಯಲೂರು ಹೋಬಳಿ ಬಸವರಾಜಪುರ ಗ್ರಾಮದಲ್ಲಿ ನಂದಿನಿ ಹಾಲಿನ ಉಪಕೇಂದ್ರವನ್ನು ಶನಿವಾರ ಕೋಮುಲ್ ನಿರ್ದೇಶಕ ಕಾಡೇನಹಳ್ಳಿ ನಾಗರಾಜ್ ಉದ್ಘಾಟಿಸಿದರು.ಜಿ.ಪಂ. ಸದಸ್ಯ ಕೆ.ಆರ್.ಕಿಟ್ಟಪ್ಪ, ತಾ.ಪಂ. ಉಪಾಧ್ಯಕ್ಷ ಎಂ.ಎಸ್.ಶ್ರೀನಿವಾಸರೆಡ್ಡಿ, ಕೋಮುಲ್ ಉಪ ವ್ಯವಸ್ಥಾಪಕ ಡಾ.ಪುಣ್ಯಕೋಟಿ ಇದ್ದರು. ಎಮ್ಮೆನತ್ತ ನಾಗರಾಜ್. ಕೋದಂಡಪ್ಪ, ರಘುಪತಿಗೌಡ ಹಾಗೂ ಇತರರು ಹಾಜರಿದ್ದರು. ಕೇಂದ್ರದ ಸಹಾಯಕ ವ್ಯವಸ್ಥಾಪಕ ನಾಗರಾಜ್ ಕಾರ್ಯಕ್ರಮ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.