ಸೋಮವಾರ, ಜೂನ್ 21, 2021
29 °C

ಸಹಕಾರ ಸಂಸ್ಥೆಗಳ ಮೇಲೆ ನೇರ ತೆರಿಗೆಗೆ ವಿರೋಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಶೇ. 33ರಷ್ಟು ನೇರ ತೆರಿಗೆ ವಿಧಿಸುವ ಕೇಂದ್ರ ಸರ್ಕಾರದ ಉದ್ದೇಶಿತ `ನೇರ ತೆರಿಗೆ ವಿಧೇಯಕ- 2012~ ವಿರೋಧಿಸಿ ವ್ಯವಹಾರ ಸ್ಥಗಿತಗೊಳಿಸಿದ ಸಹಕಾರಿ ಸಂಸ್ಥೆಗಳು, ಸೋಮವಾರ ಸಹಕಾರ ಭಾರತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.ಸಹಕಾರಿ ಸಂಸ್ಥೆಗಳು ತಮ್ಮ ಸದಸ್ಯರ ಅಭಿವೃದ್ಧಿಗೋಸ್ಕರ ಆರ್ಥಿಕ ಚಟುವಟಿಕೆ ಮತ್ತು ಸೇವಾ ಕಾರ್ಯಗಳನ್ನು ಮಾಡುತ್ತಾ ಬಂದಿವೆ. ಸಹಕಾರಿ ಸಂಸ್ಥೆಗಳು ಸೇವಾ ಸಂಸ್ಥೆಗಳೇ ಹೊರತು ಲಾಭ ತರುವ ಸಂಸ್ಥೆಗಳಲ್ಲ; ಕಂಪೆನಿಗಳೂ ಅಲ್ಲ. ಇಂತಹ ಸಂಸ್ಥೆಗಳ ಮೇಲೆ ನೇರ ತೆರಿಗೆ ವಿಧಿಸುವುದನ್ನು ವಿರೋಧಿಸಬೇಕಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.ಈಗಾಗಲೇ ದೆಹಲಿಯಲ್ಲಿ ಎಲ್ಲ ಸಹಕಾರ ಸಂಘಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಆದರೆ, ಇದುವರೆಗೂ ಯಾವುದೇ ಪರಿಣಾಮ ಬೀರಲಿಲ್ಲ. ಈ ಹಿನ್ನೆಲೆಯಲ್ಲಿ ಪ್ರತಿಭಟನೆ ಅನಿವಾರ್ಯವಾಗಿದೆ ಎಂದರು.ಮುಂಬರುವ ಬಜೆಟ್‌ನಲ್ಲಿ ಕೇಂದ್ರ ಸರ್ಕಾರ ಈ ಕಾಯ್ದೆ ಜಾರಿಗೆ ತರಲು ಮುಂದಾಗಿದೆ. ಆದರೆ, ಈ ಕಾಯ್ದೆ ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ಇದೊಂದು ದೊಡ್ಡ ಮಾರಕಾಸ್ತ್ರವಾಗಿ ಪರಿಣಮಿಸಲಿದೆ. ಎಲ್ಲ ಸಹಕಾರಿ ಸಂಘಗಳು ಬಾಗಿಲು ಮುಚ್ಚುತ್ತವೆ ಎಂದು ಪ್ರತಿಭಟನಾಕಾರರು ಆತಂಕ ವ್ಯಕ್ತಪಡಿಸಿದರು.ಪ್ರತಿಭಟನೆಯಲ್ಲಿ ಜಿಲ್ಲಾ ಸಹಕಾರ ಭಾರತಿ ಅಧ್ಯಕ್ಷ ರವಿಕುಮಾರ್, ಹಿರಿಯ ಸಹಕಾರಿಗಳಾದ ಬಿಳಕಿ ಕೃಷ್ಣಮೂರ್ತಿ, ಉಂಬ್ಳೆಬೈಲು ಮೋಹನ್, ಹೊನ್ನಪ್ಪ, ಮಹೇಶ್ವರಶೆಟ್ಟಿ, ವೆಂಕಟೇಶ್ ಮತ್ತಿತರರು ನೇತೃತ್ವ ವಹಿಸಿದ್ದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.