ಬುಧವಾರ, ಜನವರಿ 29, 2020
24 °C

ಸಹಾಯಕ ಕಂದಾಯ ಅಧಿಕಾರಿ ಅಮಾನತು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದು ಬಂಧನಕ್ಕೆ ಒಳಗಾಗಿರುವ ಪ್ರಭಾರ ಸಹಾಯಕ ಕಂದಾಯ ಅಧಿಕಾರಿ ಚಂದ್ರಕಾಂತ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ’ ಎಂದು ಬಿಬಿಎಂಪಿ ಹೆಚ್ಚುವರಿ ಆಯುಕ್ತರಾದ (ಆಡಳಿತ) ಬಿ.ಬಿ. ಕಾವೇರಿ ತಿಳಿಸಿದ್ದಾರೆ.ಆಯುಕ್ತರ ಅನುಮತಿ ಪಡೆಯದೆ ಕೇಂದ್ರ ಸ್ಥಾನ ಬಿಟ್ಟು ಹೋಗಬಾರದು ಎಂದು ಅವರು ಹೊರಡಿಸಿದ ಅಮಾನತು ಆದೇಶದಲ್ಲಿ ತಿಳಿಸಲಾಗಿದೆ. ಚಂದ್ರಕಾಂತ ಅವರ ವಿರುದ್ಧ ವಿವಿಧ ಕಲಂಗಳ ಅಡಿಯಲ್ಲಿ ಮೊಕದ್ದಮೆ ದಾಖಲಾದ ಕುರಿತು ಲೋಕಾಯುಕ್ತ ಪೊಲೀಸರಿಂದ ಮಾಹಿತಿ ಲಭ್ಯವಾಗಿದೆ ಎಂದೂ ವಿವರಿಸಲಾಗಿದೆ.

ಪ್ರತಿಕ್ರಿಯಿಸಿ (+)