ಸೋಮವಾರ, ಜೂನ್ 14, 2021
26 °C

ಸಹಾಯವಾಣಿ ಆರಂಭಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಖನೌ (ಐಎಎನ್‌ಎಸ್): ಅತ್ಯಾಚಾರ, ಲೈಂಗಿಕ ಕಿರುಕುಳದಂತಹ ಘಟನೆಯಿಂದ ನೊಂದ ಮಹಿಳೆಯರಿಗೆ ಸಾಂತ್ವನ ನೀಡಲು ಸರ್ಕಾರ `ಸಹಾಯ ವಾಣಿ~ ಆರಂಭಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಅಲಹಾಬಾದ್ ಹೈಕೋರ್ಟ್ ಸೂಚನೆ ನೀಡಿದೆ.`ವಿ ದಿ ಪೀಪಲ್~ ಎಂಬ ಸ್ವಯಂ ಸೇವಾ ಸಂಸ್ಥೆಯ ಅರ್ಜಿ ವಿಚಾರಣೆ ಸಂದರ್ಭದಲ್ಲಿ ನ್ಯಾಯಮೂರ್ತಿಗಳಾದ ರಿತುರಾಜ್  ಮತ್ತು ಉಮಾನಾಥ್ ಸಿಂಗ್ ಅವರನ್ನೊಳಗೊಂಡ ಪೀಠ, `ಶೀಘ್ರದಲ್ಲೇ ಸಹಾಯ ವಾಣಿ ಆರಂಭಿಸಿ, ನೊಂದ ಮಹಿಳೆಯರಿಗೆ ಅದರ ದೂರವಾಣಿ ಸಂಖ್ಯೆ ಲಭ್ಯವಾಗುವಂತೆ ನೋಡಿಕೊಳ್ಳಬೇಕು~ ಎಂದು ಅದು ತಿಳಿಸಿದೆ.

 

`ಅತ್ಯಾಚಾರದಂತಹ ಘಟನೆಯಿಂದ ಮಾನಸಿಕವಾಗಿ ಜರ್ಜರಿತರಾಗುವ ವ್ಯಕ್ತಿಗಳಿಗೆ ನ್ಯಾಯ ದೊರಕುವುದು ವಿಳಂಬವಾಗುತ್ತದೆ. ಇಂಥ ಸಂದರ್ಭದಲ್ಲಿ ಸಹಾಯವಾಣಿಯಂತಹ ವ್ಯವಸ್ಥೆ ನೆರವಿಗೆ ಬರಬಹುದು~ ಎಂದು ಅರ್ಜಿದಾರ ಸ್ವಯಂ ಸೇವಾ ಸಂಸ್ಥೆ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.ರಾಷ್ಟ್ರೀಯ ಅಪರಾಧ ವಿಭಾಗದ ದಾಖಲೆಗಳ ಪ್ರಕಾರ, ಒಂದು ವರ್ಷದಲ್ಲಿ 451 ಲೈಂಗಿಕ ಕಿರುಕುಳ ಪ್ರಕರಣಗಳು ಉತ್ತರ ಪ್ರದೇಶ ರಾಜ್ಯದಲ್ಲಿ ದಾಖಲಾಗಿವೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.