ಸಹೋದ್ಯೋಗಿ ಗುಂಡಿಗೆ ನಾಲ್ವರು ಸಿಆರ್‌ಪಿಎಫ್ ಯೋಧರು ಬಲಿ

7

ಸಹೋದ್ಯೋಗಿ ಗುಂಡಿಗೆ ನಾಲ್ವರು ಸಿಆರ್‌ಪಿಎಫ್ ಯೋಧರು ಬಲಿ

Published:
Updated:

ರಾಯ್‌ಪುರ (ಐಎಎನ್‌ಎಸ್): ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ಮಾನಸಿಕ ಅಸ್ವಸ್ಥ ಯೋಧನೊಬ್ಬ ತನ್ನ ಸಹೋದ್ಯೋಗಿಗಳತ್ತ ಮನಬಂದಂತೆ ಗುಂಡು ಹಾರಿಸಿದ್ದರಿಂದ ನಾಲ್ವರು ಯೋಧರು ಸಾವನ್ನಪ್ಪಿದ ಘಟನೆ ಛತ್ತೀಸ್‌ಗಡದಲ್ಲಿ ನಡೆದಿದೆ.     ದಾಂತೇವಾಡ ಸಮೀಪದ ಅರನ್‌ಪುರ ಗ್ರಾಮ ಬಳಿಯ ಸಿಆರ್‌ಪಿಎಫ್ ಕ್ಯಾಂಪ್‌ನಲ್ಲಿ ಸೋಮವಾರ ಮಧ್ಯರಾತ್ರಿ ನಡೆದ ಈ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ಮತ್ತೊಬ್ಬ ಯೋಧ ಆಸ್ಪತ್ರೆಯಲ್ಲಿ ಸಾವು, ಬದುಕಿನ ಮಧ್ಯೆ ಹೋರಾಡುತ್ತಿದ್ದಾನೆ.ಆರೋಪಿ ದೀಪ್ ಕುಮಾರ್ ತಿವಾರಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಗುಂಡು ಹಾರಿಸಲು ನಿಖರವಾದ ಕಾರಣಗಳೇನೆಂದು ತಿಳಿದುಬಂದಿಲ್ಲ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry