ಬೆಂಗಳೂರು: ಬೇಸಿಗೆಯಲ್ಲಿ ಕರುಳುಬೇನೆ ಹಾಗೂ ಇತರೆ ಸಾಂಕ್ರಾಮಿಕ ರೋಗಗಳು ಹರಡುವುದನ್ನು ತಡೆಗಟ್ಟಲು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಬಿಬಿಎಂಪಿ ಆಯುಕ್ತ ಎಂ.ಕೆ. ಶಂಕರಲಿಂಗೇಗೌಡ ಅವರು ಪಾಲಿಕೆಯ ಎಲ್ಲಾ ವಲಯದ ಆರೋಗ್ಯಾಧಿಕಾರಿಗಳು, ವೈದ್ಯಾಧಿಕಾರಿಗಳು ಹಾಗೂ ಆರೋಗ್ಯ ಪರಿವೀಕ್ಷಕರಿಗೆ ಸೂಚನೆ ನೀಡಿದ್ದಾರೆ.

ಎಲ್ಲ ವಲಯದ ಆರೋಗ್ಯ ವೈದ್ಯಾಧಿಕಾರಿಗಳು ತಮ್ಮ ಹಿರಿಯ ಆರೋಗ್ಯ ಪರಿವೀಕ್ಷಕರ ಜತೆ ತೆರಳಿ ರಸ್ತೆ ಬದಿಯಲ್ಲಿ ತೆರೆದಿಟ್ಟ ತಿಂಡಿ ಪದಾರ್ಥ ಹಾಗೂ ಕತ್ತರಿಸಿದ ಹಣ್ಣು ಮಾರಾಟ ಮಾಡುವುದನ್ನು ತೆರವುಗೊಳಿಸಲು ಕ್ರಮ ವಹಿಸುವುದು.

ಪ್ರತಿ ದಿನ ಹೋಟೆಲ್ ಮತ್ತು ಉಪಾಹಾರ ಗೃಹಗಳಿಗೆ ಭೇಟಿ ನೀಡಿ ಅಡಿಗೆ ಕೋಣೆ ಹಾಗೂ ಆಹಾರ ಸರಬರಾಜು ಮಾಡುವವರು ಶುಚಿತ್ವ ಕಾಪಾಡುತ್ತಿದ್ದಾರೆಯೇ ಎಂಬುದನ್ನು ತಪಾಸಣೆ ಮಾಡುವುದು. ಶುಚಿತ್ವ ಕಾಪಾಡದ ಹೋಟೆಲ್/ ಉಪಾಹಾರ ಗೃಹಗಳನ್ನು ಕಡ್ಡಾಯವಾಗಿ ಮುಚ್ಚಿಸಲು ಕ್ರಮ ವಹಿಸುವುದು.

ಎಲ್ಲ ಹೋಟೆಲ್ ಹಾಗೂ ಉಪಾಹಾರ ಗೃಹಗಳಲ್ಲಿ ಸಾರ್ವಜನಿಕರಿಗೆ ಕುಡಿಯಲು ಕುದಿಸಿ ಆರಿಸಿದ ನೀರನ್ನು ಸರಬರಾಜು ಮಾಡುವಂತೆ ಮಾಲೀಕರಿಗೆ ಸೂಚನೆ ನೀಡುವುದು. ಕರುಳು ಬೇನೆ ಹಾಗೂ ಇನ್ನಿತರೆ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸಲು ಮುಂಜಾಗ್ರತಾ ಕ್ರಮವಾಗಿ ಭಿತ್ತಿಪತ್ರಗಳ ಮೂಲಕ ಪ್ರಚಾರ ಕಾರ್ಯ ಮಾಡುವುದು. ಸಾರ್ವಜನಿಕ ಮೂತ್ರಾಲಯ ಹಾಗೂ ಶೌಚಾಲಯಗಳನ್ನು ಗುರುತಿಸಿ ಪ್ರತಿ ನಿತ್ಯ ಬ್ಲೀಚಿಂಗ್ ಪೌಡರ್ ಹಾಗೂ ಫಿನಾಯಿಲ್ ಸಿಂಪಡಿಸಿ ಸುತ್ತಲಿನ ಪ್ರದೇಶ ಶುಚಿಯಾಗಿರುವಂತೆ ನೋಡಿಕೊಳ್ಳುವುದು.

ಆಯಾ ವಲಯ ವ್ಯಾಪ್ತಿಯಲ್ಲಿನ ಖಾಸಗಿ ಔಷಧಾಲಯ ಹಾಗೂ ಆಸ್ಪತ್ರೆಯ ವೈದ್ಯರನ್ನು ಭೇಟಿ ಮಾಡಿ ಯಾವುದೇ ಸಾಂಕ್ರಾಮಿಕ ರೋಗಿ ಪತ್ತೆಯಾದಲ್ಲಿ ಕೂಡಲೇ ಪಾಲಿಕೆಯ ಆರೋಗ್ಯ ವೈದ್ಯಾಧಿಕಾರಿಗಳಿಗೆ ಮಾಹಿತಿ ನೀಡಲು ಸೂಚಿಸುವುದು.

ಸಾರ್ವಜನಿಕರ ಆರೋಗ್ಯ ಕಾಪಾಡುವಲ್ಲಿ ಮುತುವರ್ಜಿ ವಹಿಸಿ, ಕಾರ್ಯನಿರ್ವಹಿಸುವಂತೆ ಆಯುಕ್ತರು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ವಾಂತಿ- ಭೇದಿ: 25 ಪ್ರಕರಣ ಪತ್ತೆ
ಬೆಂಗಳೂರು: ಬೇಸಿಗೆಯಲ್ಲಿ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಪಾಲಿಕೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ವೇಳೆಗೇ ನಗರದಲ್ಲಿ ವಾಂತಿ,ಭೇದಿ ಸಮಸ್ಯೆಗೆ ಸಂಬಂಧಿಸಿದಂತೆ 25 ಪ್ರಕರಣಗಳು ಪತ್ತೆಯಾಗಿವೆ.

ವಾಂತಿ, ಭೇದಿಯಿಂದ ಬಳಲುತ್ತಿರುವ 20 ಮಂದಿ ನಗರದ ಜಾಲಿ ಮೊಹಲ್ಲಾದ ಖಾಸಗಿ ನರ್ಸಿಂಗ್ ಹೋಂ ಒಂದಕ್ಕೆ ದಾಖಲಾಗಿದ್ದಾರೆ, ಉಳಿದ ಐವರು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಬಿಬಿಎಂಪಿ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

`ರೋಗಿಗಳ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷಿಸುತ್ತಿದೆ. ವರದಿ ಬಂದ ನಂತರವೇ ಯಾವ ಕಾಯಿಲೆ ಎಂಬುದು ಗೊತ್ತಾಗಲಿದೆ~ ಎಂದು ಪಾಲಿಕೆ ಹಿರಿಯ ಆರೋಗ್ಯಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.