ಸಾಂಸ್ಕೃತಿಕ ನೀತಿ ಜಾರಿ ಅಗತ್ಯ; ಗೊ.ರು.ಚ

ಗುರುವಾರ , ಮೇ 23, 2019
32 °C

ಫಲಿತಾಂಶ (ಮುನ್ನಡೆ+ಗೆಲುವು) 0/542LIVE

ಸಾಂಸ್ಕೃತಿಕ ನೀತಿ ಜಾರಿ ಅಗತ್ಯ; ಗೊ.ರು.ಚ

Published:
Updated:

ಹಾವೇರಿ: `ಕೃಷಿ ನೀತಿ, ಕೈಗಾರಿಕೆ ನೀತಿ ಹಾಗೂ ಯುವ ನೀತಿಯಂತೆ ರಾಜ್ಯ ಸರ್ಕಾರವು ತನ್ನದೇ ಆದ ಸಾಂಸ್ಕೃತಿಕ ನೀತಿಯನ್ನು ಜಾರಿಗೆ ತರುವುದು ಅಗತ್ಯವಾಗಿದೆ~ ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ ಜಾನಪದ ತಜ್ಞ ಗೊ.ರು.ಚನ್ನಬಸಪ್ಪ ಹೇಳಿದರು.ಜಿಲ್ಲೆಯ ಶಿಗ್ಗಾವಿ ತಾಲ್ಲೂಕಿನ ಗೊಟಗೋಡಿಯಲ್ಲಿರುವ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ಬುಧವಾರ ನಡೆದ ಜಾನಪದ ದಿನ, ವಿಶ್ವವಿದ್ಯಾಲಯ ಸಂಸ್ಥಾಪನಾ ದಿನ ಹಾಗೂ `ಹಣತೆ~ ವಿವಿ ವಾರ್ತಾ ಪತ್ರಿಕೆ ಬಿಡುಗಡೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.ಡಾ.ಎಚ್.ಜೆ.ಲಕ್ಕಪ್ಪಗೌಡ ಜಾನಪದ ಅಕಾಡೆಮಿ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ರಾಜ್ಯ ಸರ್ಕಾರಕ್ಕೆ ಸಾಂಸ್ಕೃತಿಕ ನೀತಿಯನ್ನು ರಚಿಸಿ ಕೊಟ್ಟಿದ್ದರು. ಆದರೆ ಸರ್ಕಾರ ಆ ಬಗ್ಗೆ ಗಮನ ಹರಿಸಲಿಲ್ಲ ಎಂದರು.

 

ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಎಚ್.ಜೆ.ಲಕ್ಕಪ್ಪಗೌಡ ಅವರು ಜಾನಪದ ವಿವಿಯ ವಾರ್ತಾ ಪತ್ರಿಕೆ `ಹಣತೆ~ ಬಿಡುಗಡೆ ಮಾಡಿದರು. ವಿ.ವಿ.ಕುಲಪತಿ ಪ್ರೊ.ಅಂಬಳಿಕೆ ಹಿರಿಯಣ್ಣ ಅಧ್ಯಕ್ಷತೆವಹಿಸಿದ್ದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry