ಸಾಕ್ಷರತೆಯಿಂದ ವ್ಯಕ್ತಿತ್ವ ಪರಿವರ್ತನೆ

ಗುರುವಾರ , ಮೇ 23, 2019
32 °C

ಫಲಿತಾಂಶ (ಮುನ್ನಡೆ+ಗೆಲುವು) 0/542LIVE

ಸಾಕ್ಷರತೆಯಿಂದ ವ್ಯಕ್ತಿತ್ವ ಪರಿವರ್ತನೆ

Published:
Updated:

ವಿಜಾಪುರ: ಸಾಕ್ಷರತೆ ಇಲ್ಲದೆ ಹೋದರೆ ಸಾಮಾಜಿಕ ಮತ್ತು ಆರ್ಥಿಕ ಬೆಳವಣಿಗೆ ಸಾಧ್ಯವಿಲ್ಲ. ವ್ಯಕ್ತಿಯ ಅಭಿವೃದ್ಧಿಯಲ್ಲಿ ಶಿಕ್ಷಣವೇ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಪ್ರಭಾರ ಜಿಲ್ಲಾಧಿಕಾರಿ ಜಿ.ಎಸ್. ಜಿದ್ದಿಮನಿ ಹೇಳಿದರು.ಇಲ್ಲಿಯ ಮಹಿಳಾ ವಿಶ್ವವಿದ್ಯಾಲಯದಲ್ಲಿ ಜಿಲ್ಲಾ ಲೋಕ ಶಿಕ್ಷಣ ಸಮಿತಿಯ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸಾಕ್ಷರತಾ ವಿಚಾರ ಸಂಕಿರಣದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು.ಸಾಕ್ಷರತೆ ಪ್ರತಿ ವ್ಯಕ್ತಿಯ ಬದುಕಿನ ಬದಲಾವಣೆಗೆ ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ. ಅಕ್ಷರ ಜ್ಞಾನವಿಲ್ಲದ ಮನುಷ್ಯ ಶೋಷಣೆಗೆ ಒಳಗಾಗುತ್ತಾನೆ. ಬದುಕು ಅಂಧಕಾರವಾಗುತ್ತದೆ. ಬೆಳೆಯುತ್ತಿರುವ ಸಮಾಜದಲ್ಲಿ ಪ್ರತಿ ವ್ಯಕ್ತಿಯೂ ವಿದ್ಯಾವಂತನಾಗುವುದು ಅಗತ್ಯವಾಗಿದೆ. ಶಾಲಾ ಶಿಕ್ಷಣದಿಂದ ವಂಚಿತರಾದ ಜನರಿಗಾಗಿ ರೂಪಿಸಿರುವ ಸಾಕ್ಷರ ಭಾರತ ಕಾರ್ಯಕ್ರಮದಡಿ ಎಲ್ಲರೂ ಅಕ್ಷರಸ್ಥರಾಗಬೇಕು ಎಂದರು.ವಿಚಾರ ಸಂಕಿರಣ ಉದ್ಘಾಟಿಸಿದ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಂಕ್ರುಬಾಯಿ ಚಲವಾದಿ, ಸಾಕ್ಷರತೆಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದರೂ ಸಹ ನಾವು ನಿರೀಕ್ಷಿತ ಪ್ರಮಾಣದಲ್ಲಿ ಸಾಕ್ಷರತೆಯ ಗುರಿ ಸಾಧಿಸುವಲ್ಲಿ ಯಶಸ್ಸು ಕಂಡಿಲ್ಲ ಎಂದರು.ಸಾಕ್ಷರತಾ ಪ್ರಮಾಣದಲ್ಲಿ ವಿಜಾಪುರ ಜಿಲ್ಲೆ ರಾಜ್ಯದಲ್ಲಿ 26ನೇ ಸ್ಥಾನಲ್ಲಿರುವುದು ಅತ್ಯಂತ ವಿಷಾದನೀಯ ಸಂಗತಿಯಾಗಿದೆ. ಅನಕ್ಷರತೆಯ ಕಾರಣದಿಂದ ಬಡತನ, ಜೀತ ಪದ್ಧತಿ, ಬಾಲ್ಯ ವಿವಾಹ ಜಿಲ್ಲೆಯಲ್ಲಿ ಇನ್ನೂ ಮುಂದುವರೆದಿವೆ. ಜನರು ಎಲ್ಲಿಯವರೆಗೂ ಅಕ್ಷರ ಜ್ಞಾನದಿಂದ ವಂಚಿತರಾಗುತ್ತಾರೊ ಅಲ್ಲಿಯವರೆಗೆ ಇಂತಹ ಅನಿಷ್ಠ ಪದ್ಧತಿಯಿಂದ ಬಂಧಮುಕ್ತ ರಾಗುವುದಿಲ್ಲ. ಈ ನಿಟ್ಟಿನಲ್ಲಿ ಎಲ್ಲರೂ ಅಕ್ಷರ ಕಲಿಯಲು ಸ್ವಯಂ ಪ್ರೇರಣೆಯಿಂದ ಮುಂದಾಗಬೇಕೆಂದು ಎಂದು ಕರೆ ನೀಡಿದರು.ಜಿ.ಪಂ. ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಶಿವಾನಂದ ಅವಟಿ, ಜಿ.ಪಂ. ಸಿಇಓ ಎ.ಎನ್ ಪಾಟೀಲ, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಜೆ.ಎಸ್. ಪೂಜಾರ, ಮಹಿಳಾ ವಿವಿ ಕುಲಸಚಿವ ಪ್ರೊ. ಜಿ.ಆರ್. ನಾಯಕ, ಮಹಿಳಾ ಅಧ್ಯಯನ ವಿಭಾಗದ ಮುಖ್ಯಸ್ಥೆ ಡಾ.ಆರ್. ಸುನಂದಮ್ಮ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಕೆ.ಎಂ. ಚೌರ ಇತರರು ವೇದಿಕೆಯಲ್ಲಿದ್ದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry