ಕೃಷ್ಣರಾಜಪೇಟೆ: ಅನಕ್ಷರಸ್ಥರನ್ನು ಸಾಕ್ಷರರನ್ನಾಗಿಸುವ ಜವಾಬ್ದಾರಿ ಸಾಕ್ಷರತಾ ಕಾರ್ಯಕರ್ತರ ಮೇಲಿದ್ದು, ಈ ಕಾರ್ಯವನ್ನು ಅವರು ಬದ್ಧತೆಯಿಂದ ಮಾಡಬೇಕು ಎಂದು ತಾಲ್ಲೂಕು ಪಂಚಾಯಿತಿ ವಿರೋಧ ಪಕ್ಷದ ಮುಖಂಡ ರವೀಂದ್ರಬಾಬು ತಿಳಿಸಿದರು.

ಲೋಕಶಿಕ್ಷಣ ಇಲಾಖೆ ವತಿಯಿಂದ ಪಟ್ಟಣದ ಶಿಕ್ಷಕರ ಭವನದಲ್ಲಿ ಮಂಗಳವಾರ ತಾಲ್ಲೂಕಿನ ಸಾಕ್ಷರತಾ ತರಬೇತುದಾರರಿಗೆ ಏರ್ಪಡಿಸಿದ್ದ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಸಾಕ್ಷರತೆಯ ಪ್ರಮಾಣವು ದೇಶದ ಪ್ರಗತಿಯ ಸೂಚಕವಾಗಿದೆ. ಈ ಹಿನ್ನೆಲೆಯಲ್ಲಿ ಭಾರತ ದೇಶವು ಪ್ರಗತಿ ಹೊಂದಿದ ರಾಷ್ಟ್ರ ಎಂದು ಗುರುತಿಸಿಕೊಳ್ಳಲು ಎಲ್ಲ ರಂಗಗಳಲ್ಲಿಯೂ ಮುಂದುವರೆಯಬೇಕಾದ ಅಗತ್ಯವಿದೆ ಎಂದರು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಶಾಂತಮ್ಮ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉಪಾಧ್ಯಕ್ಷೆ ಭುವನೇಶ್ವರಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್. ರೇವಣ್ಣ, ಲೋಕಶಿಕ್ಷಣ ಇಲಾಖೆಯ ಜಿಲ್ಲಾ ಕಾರ್ಯಕ್ರಮ ಅಧಿಕಾರಿ ಅಂ.ಚಿ. ಸಣ್ಣಸ್ವಾಮಿಗೌಡ, ತಾಲ್ಲೂಕು ಸಾಕ್ಷರತಾ ಸಂಯೋಜಕರಾದ ಮಂಜುನಾಥ್, ಬಿ.ಎನ್. ರಾಮಚಂದ್ರ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.