ಸೋಮವಾರ, ಜೂನ್ 21, 2021
21 °C

ಸಾಚಾರ್‌ವರದಿ ತಿರಸ್ಕರಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ/ ಹುಬ್ಬಳ್ಳಿ:  `ರಾಜಿಂದರ್ ಸಾಚಾರ್ ಸಮಿತಿ ಹಾಗೂ ರಂಗನಾಥ ಮಿಶ್ರ ಆಯೋಗ ನೀಡಿರುವ ವರದಿ ಸುಳ್ಳಿನಿಂದ ಕೂಡಿದ್ದು, ಅವನ್ನು ತಿರಸ್ಕರಿಸಬೇಕು~ ಎಂದು ವಿಶ್ವ ಹಿಂದೂ ಪರಿಷತ್‌ನ ಅಂತರರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವೀಣ ತೊಗಾಡಿಯಾ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.`ಮುಸ್ಲಿಮರು ಹಾಗೂ ಕ್ರಿಶ್ಚಿಯನ್‌ರು ಹಿಂದೂಗಳಿಗಿಂತ ಆರ್ಥಿಕವಾಗಿ ಹಿಂದುಳಿದಿದ್ದಾರೆ ಎಂದು ತಿಳಿಸಲಾಗಿದೆ. ಆದರೆ ವರ್ಲ್ಡ್ ಎಕಾನಾಮಿ ಆಫ್ ಸರ್ವೆ ಪ್ರಕಾರ ಮುಸ್ಲಿಮರ ಮಾಸಿಕ ವರಮಾನ ತಲಾ 42 ಸಾವಿರ ರೂಪಾಯಿಗಳಿದ್ದರೆ, ಹಿಂದೂಗಳ ಮಾಸಿಕ ವರಮಾನ ತಲಾ 24 ಸಾವಿರ ರೂಪಾಯಿ~ ಎಂದರು.`ಹಿಂದುಳಿದ ವರ್ಗಗಳ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ನೀಡಲಾಗುತ್ತಿದೆ~ ಎಂದು ಅವರು ಮಂಗಳವಾರ ಬೆಳಗಾವಿ ಮತ್ತು ಹುಬ್ಬಳ್ಳಿಯಲ್ಲಿ ಏರ್ಪಡಿಸಿದ್ದ ಪ್ರತ್ಯೇಕ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.