ಸೋಮವಾರ, ಮೇ 23, 2022
22 °C

ಸಾಚಾರ್ ವರದಿ ಜಾರಿಗೆ ಸರ್ಕಾರ ಬದ್ಧ: ರಾಹುಲ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ಮುಸ್ಲಿಂ ಸಮಾಜಕ್ಕೆ ಹೆಚ್ಚಿನ ಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ಸಾಚಾರ್ ವರದಿ ಶಿಫಾರಸು ಜಾರಿಗೆ ಸರ್ಕಾರ ಬದ್ಧವಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಭರವಸೆ ನೀಡಿದರು.ನಗರದ ಬಾಪೂಜಿ ಎಂಬಿಎ ಕಾಲೇಜು ಮೈದಾನದಲ್ಲಿ ಭಾನುವಾರ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳ ಜತೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಅಬ್ದುಲ್ ಎಂಬವರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಸದ್ಯಕ್ಕೆ ವರದಿ ಜಾರಿಗೆ ಸಂವಿಧಾನದಲ್ಲಿ ಕೆಲ ಅಡೆತಡೆಗಳಿವೆ ಎಂದು ಸ್ಪಷ್ಟಪಡಿಸಿದರು.ಪಕ್ಷದಲ್ಲಿ ಮಹಿಳೆಯರು, ಎಲ್ಲ ಜಾತಿ ಹಾಗೂ ಕೋಮಿನ ಕಾರ್ಯಕರ್ತರಿಗೆ ಅವಕಾಶ ನೀಡಲಾಗುವುದು. ಯಾರನ್ನೂ ಕಡೆಗಣಿಸುವ ಪ್ರಶ್ನೆಯೇ ಇಲ್ಲ. ನಾಮನಿರ್ದೇಶನ ಮಾಡುವ ಸಂದರ್ಭದಲ್ಲಿ ಸೂಕ್ಷಾತಿಸೂಕ್ಷ್ಮ ಜಾತಿಯವರಿಗೆ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.ಪಕ್ಷದಲ್ಲಿ ಗೆದ್ದ ಅಭ್ಯರ್ಥಿಗಳಿಗೆ ಮಾತ್ರವೇ ಟಿಕೆಟ್ ನೀಡಲಾಗುತ್ತಿದೆ. ಇದು ಬದಲಾಗಬೇಕು. ಹೊಸಬರಿಗೆ ಅವಕಾಶ ದೊರೆಯುವಂತಾಗಬೇಕು. ಯಾರೂ ಸಹ ಸ್ವಾರ್ಥಕ್ಕಾಗಿ ಕೆಲಸ ಮಾಡಬಾರದು ಎಂದು ಹೇಳಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.