ಸೋಮವಾರ, ಮೇ 10, 2021
28 °C

ಸಾಣೇಹಳ್ಳಿಯಲ್ಲಿ ವಿಶೇಷ ವಿವಾಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸದುರ್ಗ: ತಾಲ್ಲೂಕಿನ ಸಾಣೇಹಳ್ಳಿ ತರಳಬಾಳು ಶಾಖಾ ಮಠದಲ್ಲಿ ವಿಧವೆ-ವಿಧುರರಿಬ್ಬರ ಅಪರೂಪದ ವಿವಾಹ ಸೋಮವಾರ ನಡೆಯಿತು.ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ಈ ವಿವಾಹ ನಡೆಯಿತು.

ಸುನಿತಾ ಹಾಗೂ ಸದಾಶಿವ ದಾಂಪತ್ಯ ಜೀವನಕ್ಕೆ ಕಾಲಿರಿಸಿದವರು. ಸದಾಶಿವ  ಕಾಲೇಜಿನಲ್ಲಿ ಉಪನ್ಯಾಸಕ. ಚಿಕ್ಕ ವಯಸ್ಸಿನಲ್ಲಿಯೇ ಹೆಂಡತಿಯನ್ನು ಕಳೆದುಕೊಂಡಿದ್ದರು.ತನ್ನ ಎರಡು ಚಿಕ್ಕ ಮಕ್ಕಳ ಜವಾಬ್ದಾರಿ ಹೊರಬೇಕಾದ ಕಾರಣದಿಂದ ಸುನಿತಾ ಅವರನ್ನು ಮದುವೆಯಾಗಿದ್ದಾರೆ.ಸಾಣೇಹಳ್ಳಿ ಮಠದಲ್ಲಿ ಕಾಲೇಜಿನ ಉಪನ್ಯಾಸಕರು, ಶಿಕ್ಷಕರು, ಎರಡು ಕುಟುಂಬದ ಸಂಬಂಧಿಗಳ ಸಮ್ಮುಖದಲ್ಲಿ ವಿವಾಹ ನೆರವೇರಿತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.