ಸೋಮವಾರ, ಏಪ್ರಿಲ್ 19, 2021
23 °C

ಸಾತ್ವಿಕ ಬದುಕು ಸಾಗಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಂತಾಮಣಿ: ಸಮಾಜದಲ್ಲಿನ ಪ್ರತಿಯೊಬ್ಬರೂ ಸಾತ್ವಿಕ ಬದುಕು ಸಾಗಿಸಬೇಕು ಎಂದು ವೇದಬ್ರಹ್ಮ ಸಿ.ಎಸ್.ಅನಂತಾಚಾರ್ ತಿಳಿಸಿದರು.ನಗರದ ರಾಘವೇಂದ್ರಸ್ವಾಮಿ ಮಠದಲ್ಲಿ ಶನಿವಾರ ಏರ್ಪಡಿಸಿದ್ದ ಅಖಿಲ ಕರ್ನಾಟಕ ಬ್ರಾಹ್ಮ ಮಹಾಸಭಾದ ರಾಜ್ಯ ಮಟ್ಟದ ಪದಾಧಿಕಾರಿಗಳ ಸಭೆ ಉದ್ಘಾಟಿಸಿ ಮಾತನಾಡಿದರು.ಮಾನವ ಜನ್ಮ ಶ್ರೇಷ್ಠವಾದುದು, ಮನುಷ್ಯರು ಮನುಷ್ಯರಾಗಿ ಬಾಳುವುದನ್ನು ಕಲಿಯಬೇಕು. ಮಾನವೀಯ ಮೌಲ್ಯಗಳನ್ನು ರೂಢಿಸಿಕೊಂಡರೆ ಸಮಾಜದಲ್ಲಿನ ಅಶಾಂತಿ ಬಹುಮಟ್ಟಿಗೆ ಕಡಿಮೆಯಾಗುತ್ತದೆ ಎಂದರು.ವಿದ್ಯಾವಂತರೂ ಸಮಾಜದ ಉನ್ನತ ವರ್ಗವೆಂದು ಪ್ರಸಿದ್ಧಿಯಾಗಿರುವ ಜನರು ಸಮಾಜದ ಉನ್ನತಿಗೆ ಶ್ರಮಿಸಬೇಕಾಗಿದೆ ಎಂದು ಕಿವಿಮಾತು ಹೇಳಿದರು.ಬ್ರಾಹ್ಮಣ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಆರ್.ಲಕ್ಷ್ಮೀಕಾಂತ್,  ಮಹಾಸಭಾದ ಕಾರ್ಯಚಟುವಟಿಕೆಗಳ ವಿವರಗಳನ್ನು ನೀಡಿದರು. ಮಹಾಸಭಾವು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿದ್ದು ಮುಂದಿನ ದಿನಗಳಲ್ಲಿ ಸಮುದಾಯ ಹಾಗೂ ಸಮಾಜದ ಅಭಿವೃದ್ಧಿಗೆ ಇನ್ನೂ ಹೆಚ್ಚಿನ ಕಾರ್ಯಕ್ರಮ ಹಮ್ಮಿಕೊಳ್ಳುವುದಾಗಿ ನುಡಿದರು.ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 20 ಮಂದಿ ಗಣ್ಯರನ್ನು ಸನ್ಮಾನಿಸಲಾಯಿತು.ಮಹಾಸಭಾದ ಅಧ್ಯಕ್ಷ ಸಿ.ವಿ.ಎಲ್.ಶಾಸ್ತ್ರೀ, ಉಪಾಧ್ಯಕ್ಷ ಎಲ್.ಟಿ.ಹೆಗ್ಗಡೆ, ಉಪಾಧ್ಯಕ್ಷ ಶಂಕರನಾರಾಯಣ್, ರಾಜಶೇಖರ್, ಕಟ್ಟಾಸತ್ಯನಾರಾಯಣ, ಲತಾ ಉಪಸ್ಥಿತರಿದ್ದರು.

ಹಿರಿಯ ವಕೀಲ ಶ್ರೀನಾಥ್ ಸ್ವಾಗತಿಸಿದರು. ಜಿ.ಜಯರಾಂ  ನಿರೂಪಿಸಿದರು. ಎಚ್.ವೆಂಕಟೇಶಮೂರ್ತಿ ವಂದಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.