ಸಾಧ್ವಿ ಪ್ರಗ್ಯಾ ಬಂಧನ

7

ಸಾಧ್ವಿ ಪ್ರಗ್ಯಾ ಬಂಧನ

Published:
Updated:

ಮುಂಬೈ (ಪಿಟಿಐ): ಸಮ್‌ಜೋತಾ ಎಕ್ಸ್‌ಪ್ರೆಸ್ ರೈಲು ಸ್ಫೋಟದ ಶಂಕಿತ ಆರೋಪಿ ಸುನಿಲ್ ಜೋಶಿ ಅವರ ಹತ್ಯೆಗೆ ಸಂಬಂಧಿಸಿದಂತೆ ಮಾಲೆಗಾಂವ್ ಸ್ಫೋಟದ ಪ್ರಮುಖ ಆರೋಪಿ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಅವರನ್ನು ಮಧ್ಯಪ್ರದೇಶ ಪೊಲೀಸರು ಬಂಧಿಸಿದ್ದಾರೆ.  ವಿಶೇಷ ಮೋಕಾ ನ್ಯಾಯಾಲಯದ ಅನುಮತಿ ಪಡೆದ ಪೊಲೀಸರು ಸಾಧ್ವಿ ಅವರನ್ನು ಬಂಧಿಸಿದರು ಎಂದು ವಿಶೇಷ ಸರ್ಕಾರಿ ಅಭಿಯೋಜಕಿ ರೋಹಿಣಿ ಸಾಲಿಯಾನ್ ತಿಳಿಸಿದ್ದಾರೆ.ಸದ್ಯದಲ್ಲೇ ಅವರನ್ನು ಹೆಚ್ಚಿನ ವಿಚಾರಣೆಗಾಗಿ  ಮಧ್ಯಪ್ರದೇಶಕ್ಕೆ ಕರೆದೊಯ್ಯಲಾಗುವುದು ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry