ಬುಧವಾರ, ಮೇ 12, 2021
19 °C

ಸಾಧ್ವಿ ಪ್ರಗ್ಯಾ ಸಿಂಗ್ ಜಾಮೀನು ಅರ್ಜಿ ವಜಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ, (ಪಿಟಿಐ): 2008ರ ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಮೋಕಾ ಕಾಯ್ದೆಯಡಿ ಆಪಾದನೆ ಎದುರಿಸುತ್ತಿರುವ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಅವರ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.ಜಾಮೀನು ಅರ್ಜಿಯಲ್ಲಿ ಯಾವುದೇ ಹುರುಳಿಲ್ಲ ಎಂದು ಜೆ.ಎಂ.ಪಾಂಚಾಲ್ ಮತ್ತು ಎಚ್.ಎಲ್.ಗೋಖಲೆ ಅವರನ್ನು ಒಳಗೊಂಡ ನ್ಯಾಯಪೀಠ ತಿಳಿಸಿದೆ.ತಮ್ಮನ್ನು ಬಂಧಿಸಿರುವ ಮಹಾರಾಷ್ಟ್ರ ಭಯೋತ್ಪಾದನೆ ನಿಗ್ರಹ ದಳದ ಪೊಲೀಸರು, ನಿಯಮದಂತೆ ಬಂಧಿಸಿದ 90 ದಿನಗಳ ಒಳಗಾಗಿ ದೋಷಾರೋಪ ಪಟ್ಟಿ ಸಲ್ಲಿಸಲು ವಿಫಲರಾಗಿರುವುದರಿಂದ ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕು ಎಂದು ಸಾಧ್ವಿ ಕೋರಿದ್ದರು.ಆದರೆ ಮಹಾರಾಷ್ಟ್ರ ಸರ್ಕಾರ ಅಕ್ರಮ ಬಂಧನದ ಆಪಾದನೆಯನ್ನು ತಳ್ಳಿಹಾಕಿದ್ದು, ಸಾಧ್ವಿ ಅವರನ್ನು ಅಕ್ಟೋಬರ್ 23ರಂದು ಬಂಧಿಸಿ ಕಾನೂನಿನ ಪ್ರಕಾರ ನ್ಯಾಯಾಧೀಶರ ಎದುರು ಹಾಜರುಪಡಿಸಲಾಗಿದೆ ಎಂದು ತಿಳಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.