ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಬಂಧನ

7

ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಬಂಧನ

Published:
Updated:

ಮುಂಬೈ (ಪಿಟಿಐ): ಮಾಲೇಗಾಂವ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಇದೀಗ ಸುನಿಲ್ ಜೋಶಿ ಅವರ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಶಂಕೆಯ ಮೇಲೆ ಶನಿವಾರ ಮತ್ತೊಮ್ಮೆ ಬಂದನಕ್ಕೆ ಒಳಗಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.ಸುನಿಲ್ ಜೋಶಿ, ಸಂಜೋತಾ ಎಕ್ಸ್‌ಪ್ರೆಸ್ ಸ್ಪೋಟದಲ್ಲಿ ಭಾಗಿಯಾಗಿದ್ದ ಆರೋಪಿಗಳಲ್ಲಿ ಒಬ್ಬರೆಂಬ ಶಂಕೆ ಇತ್ತು. ಅವರನ್ನು 2007ರಲ್ಲಿ ಮುಂಬೈನ ದಿವಾಸ್ ಬಳಿ ಕೊಲೆ ಮಾಡಲಾಗಿತ್ತು. ಈ ಕೊಲೆಯ ಸಂಶಯದ ಮೇಲೆ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಅವರನ್ನು ಇಲ್ಲಿನ ‘ಮೋಕಾ’ ವಿಶೇಷ ನ್ಯಾಯಾಲಯದ ಅನುಮತಿ ಮೇರೆಗೆ ಬಂಧಿಸಲಾಗಿದೆ’ ಎಂದು ಮಧ್ಯಪ್ರದೇಶದ ಹಿರಿಯ  ಪೊಲೀಸ್  ಅಧಿಕಾರಿಗಳು ತಿಳಿಸಿದ್ದಾರೆ. ‘ಇದೊಂದು ಔಪಚಾರಿಕ ಬಂಧನ’ ಎಂದು ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಪರ ವಕೀಲ ಗಣೇಶ ಸೋವಾನಿ ಸುದ್ದಿ ಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry