ಸೋಮವಾರ, ಡಿಸೆಂಬರ್ 16, 2019
17 °C

ಸಾಫ್ಟ್‌ವೇರ್ ಉದ್ಯೋಗಿ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸಾಫ್ಟ್‌ವೇರ್ ಕಂಪೆನಿ ಉದ್ಯೋಗಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜೆ.ಸಿ.ನಗರ ಸಮೀಪದ ಕುರುಬರಹಳ್ಳಿಯಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.ಮೂಲತಃ ಧಾರವಾಡದವರಾದ ಮಹೇಶ್‌ಕುಮಾರ್ (28) ಆತ್ಮಹತ್ಯೆ ಮಾಡಿಕೊಂಡವರು. ಆರು ವರ್ಷಗಳ ಹಿಂದೆ ಪೋಷಕರೊಂದಿಗೆ ನಗರಕ್ಕೆ ಬಂದ ಅವರು, ಕುರುಬರಹಳ್ಳಿಯಲ್ಲಿ ಬಾಡಿಗೆ ಮನೆ ಪಡೆದು ವಾಸವಾಗಿದ್ದರು. ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ಮಹೇಶ್ ತಮ್ಮ ಕೋಣೆಗೆ ತೆರಳಿ ನೇಣು ಹಾಕಿಕೊಂಡಿದ್ದಾರೆ.ಮಗನನ್ನು ಊಟಕ್ಕೆ ಕರೆಯಲು ತಾಯಿ ಬಾಗಿಲು ಬಡಿದಿದ್ದಾರೆ. ಈ ವೇಳೆ ಒಳಗಿನಿಂದ ಯಾವುದೇ ಪ್ರತಿಕ್ರಿಯೆ ಬಾರದ ಕಾರಣ ಆತಂಕಗೊಂಡ ಅವರು, ಕಿಟಕಿಯಿಂದ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದರು.ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ ಎಂದು ಮಹಾಲಕ್ಷ್ಮೀ ಲೇಔಟ್ ಪೊಲೀಸರು ತಿಳಿಸಿದ್ದಾರೆ.ಕಾರ್ಮಿಕ ಸಾವು: ಟ್ರ್ಯಾಲಿ ಮೂಲಕ ಮುದ್ರಣ ಯಂತ್ರವನ್ನು ಸಾಗಿಸುತ್ತಿದ್ದ ವೇಳೆ ದೀಪಕ್ ಕುಮಾರ್ ಮೆಹ್ತಾ (28) ಎಂಬ ಕಾರ್ಮಿಕನ ಮೇಲೆ ಯಂತ್ರ ಉರುಳಿಬಿದ್ದಿರುವ ಘಟನೆ ಮಹಾಲಕ್ಷ್ಮೀಲೇಔಟ್ ಸಮೀಪದ ಅಶೋಕಪುರಂನ ಕುಮಾರ್ ಇಂಡಸ್ಟ್ರೀಸ್ ಎಂಬ ಕಾರ್ಖಾನೆಯಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ.ಅಪಘಾತದಲ್ಲಿ ತೀವ್ರ ಗಾಯಗೊಂಡ ದೀಪಕ್, ತಡರಾತ್ರಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಪ್ರತಿಕ್ರಿಯಿಸಿ (+)