ಗುರುವಾರ , ಏಪ್ರಿಲ್ 15, 2021
31 °C

ಸಾಫ್ಟ್‌ವೇರ್ ಎಂಜಿನಿಯರ್ ಪತ್ನಿಯ ಕೊಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಸಾಫ್ಟ್‌ವೇರ್ ಎಂಜಿನಿಯರ್ ಪತ್ನಿಯ ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ನಗರದ ಜೆ.ಪಿ.ನಗರದಲ್ಲಿ ಮಂಗಳವಾರ ರಾತ್ರಿ ಜರುಗಿದೆ.

ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿರುವ ಸುನಿಲ್‌ಕುಮಾರ್ ಪತ್ನಿ ಅಶ್ವಿನಿ (24) ಕೊಲೆಯಾದವರು. ಎರಡು ವರ್ಷಗಳ ಹಿಂದೆ ಅಶ್ವಿನ್‌ಕುಮಾರ್ ಅವರನ್ನು ಅಶ್ವಿನಿ ವರಿಸಿದ್ದರು. ಒಂದು ತಿಂಗಳ ಸಂಸಾರ ನಡೆಸಿದ ಇಬ್ಬರ ನಡುವೆ ವಿರಸ ಉಂಟಾಗಿತ್ತು. ಈ ನಡುವೆ ಪತಿ ಮನೆಯವರು ವರದಕ್ಷಿಣೆಗೆ ಒತ್ತಾಯಿಸುತ್ತಿದ್ದಾರೆ ಎಂದು ಆರೋಪಿಸಿ ಅಶ್ವಿನಿ ಬೆಂಗಳೂರಿನ ಹಲಸೂರು ಗೇಟ್ ಮಹಿಳಾ ಪೊಲೀಸ್ ಠಾಣೆಯಲ್ಲಿ  ದೂರು ಸಹ ದಾಖಲಿಸಿದ್ದರು. ನಂತರ ಪತಿ ಮನೆ ತೊರೆದು ನಗರದ ಜೆ.ಪಿ.ನಗರ 13ನೇ ಮುಖ್ಯರಸ್ತೆ, 10ನೇ ಅಡ್ಡರಸ್ತೆಯಲ್ಲಿರುವ ತವರು ಮನೆಗೆ ಬಂದಿದ್ದರು. ಅಲ್ಲದೆ ಇಬ್ಬರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು ಎಂದು ಪೊಲೀಸರು ತಿಳಿಸಿದರು

ಪೋಷಕರಾದ  ಜಗನ್ನಾಥ್ ಆಚಾರ್-ರಾಜರಾಜೇಶ್ವರಿ ಚಿತ್ರದುರ್ಗಕ್ಕೆ ತೆರಳಿದ್ದರು. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ದುಷ್ಕರ್ಮಿ ಮನೆಯ ಒಳನುಗ್ಗಿ ಅಶ್ವಿನಿ ಅವರ ಕತ್ತು ಕೊಯ್ದು ಕೊಲೆ ಮಾಡಿದ್ದಾನೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.