ಗುರುವಾರ , ಜೂನ್ 24, 2021
24 °C

ಸಾಮಾಜಿಕವಾಗಿ ಒಂದಾಗಲು ಒಕ್ಕಲಿಗರಿಗೆ ಕರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: `ಎಲ್ಲ ರಂಗಗಳಲ್ಲಿಯೂ ತಮ್ಮ ಛಾಪನ್ನು ಮೂಡಿಸಿರುವ ಒಕ್ಕಲಿಗರೆಲ್ಲರೂ ಸಾಮಾಜಿಕವಾಗಿ ಒಂದಾಗಬೇಕು~ ಎಂದು ಚಲನಚಿತ್ರ ನಿರ್ಮಾಪಕ ಕೆ.ಸಿ.ಎನ್.ಚಂದ್ರಶೇಖರ್ ಕರೆ ನೀಡಿದರು.ನಗರದಲ್ಲಿ ಭಾನುವಾರ ಮೈಕೊ ಒಕ್ಕಲಿಗರ ಕ್ರಿಯಾ ಸಮಿತಿ ಆಯೋಜಿಸಿದ್ದ 23 ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, `ಒಕ್ಕಲಿಗ ಸಮುದಾಯದಲ್ಲಿ ಸಾಕಷ್ಟು ಜನರು ಸರ್ಕಾರದ ಉನ್ನತ ಹುದ್ದೆಗಳೂ ಸೇರಿದಂತೆ ವಿವಿಧ ಸೇವೆಗಳಲ್ಲಿದ್ದಾರೆ.ಒಕ್ಕಲಿಗರ ಸಂಘಗಳೂ ತಮ್ಮ ತಮ್ಮ ಮಿತಿಯಲ್ಲಿ ಉತ್ತಮ ಕೆಲಸ ಮಾಡುತ್ತಿವೆ. ಸಮಾಜದಲ್ಲಿ ತಮ್ಮ ಪ್ರಾತಿನಿಧ್ಯಕ್ಕಾಗಿ ಒಕ್ಕಲಿಗರೆಲ್ಲರೂ ಒಗ್ಗೂಡಬೇಕು~ ಎಂದರು.ಆದಿಚುಂಚನಗಿರಿ ಮಠದ ಸೌಮ್ಯನಾಥ ಸ್ವಾಮೀಜಿ ಮಾತನಾಡಿ, `ದೇಶದ ಅನ್ನದಾತನಾದ ರೈತನ ಬಗ್ಗೆ ಸರ್ಕಾರಗಳು ಉದಾಸೀನ ಪ್ರವೃತ್ತಿ ಅನುಸುತ್ತಿರುವುದು ಸರಿಯಲ್ಲ. ಇದೇ ಪರಿಸ್ಥಿತಿ ಮುಂದುವರೆದರೆ ಅನ್ನದಾತನ ಅವನತಿ ದೂರವಿಲ್ಲ~ ಎಂದು ಅವರು ಕಳವಳ ವ್ಯಕ್ತ ಪಡಿಸಿದರು.ಸಮಾರಂಭದಲ್ಲಿ ಬೆಂಗಳೂರು ದಕ್ಷಿಣ ತಾಲ್ಲೂಕಿನ ತಹಶೀಲ್ದಾರ್ ಪುಟ್ಟೇಗೌಡ, ವಿಶ್ವಭಾರತಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಕೆ.ಕೆ. ಚಂದ್ರಪ್ಪ, ಪ್ರಗತಿಪರ ರೈತ ಮಹಿಳೆ ಕೆ.ಸಿ. ಮಂಜುಳ ಹಾಗೂ ಎಚ್. ರಾಜಣ್ಣ ಅವರನ್ನು ಸನ್ಮಾನಿಸಲಾಯಿತು.ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಬಿ.ಕೆಂಚಪ್ಪಗೌಡ, ಮೈಕೊ ಒಕ್ಕಲಿಗರ ಕ್ರಿಯಾ ಸಮಿತಿಯ ಅಧ್ಯಕ್ಷ ರಾಜಣ್ಣ ಮತ್ತಿತರರು ಉಪಸ್ಥಿತರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.