ಮಂಗಳವಾರ, ಮೇ 11, 2021
24 °C

ಸಾಮಾಜಿಕ ಜವಾಬ್ದಾರಿ ಅರಿಯಿರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೆಜಿಎಫ್: ಪ್ರತಿಯೊಬ್ಬರು ಸಾಮಾಜಿಕ ಜವಾಬ್ದಾರಿ ಅರಿಯಬೇಕಾಗಿದೆ. ಈ ನಿಟ್ಟಿನಲ್ಲಿ ಎನ್‌ಎಸ್‌ಎಸ್ ಅಂತಹ ಕಾರ್ಯಕ್ರಮದಿಂದ ವಿದ್ಯಾರ್ಥಿಗಳು ಸಾಮಾಜಿಕ ಕರ್ತವ್ಯವನ್ನು ಅರಿತುಕೊಳ್ಳುವುದು ಸಾಧ್ಯವಿದೆ~ ಎಂದು  ಬೂದಿಕೋಟೆ ಸರ್ಕಾರಿ ಕಿರಿಯ ಕಾಲೇಜು ಉಪನ್ಯಾಸಕ ಜನಾರ್ದನ ಹೇಳಿದರು.ರಾಬರ್ಟ್‌ಸನ್‌ಪೇಟೆಯ ಬಾಲಕರ  ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ಆರಂಭವಾದ ನೂತನ ಎಸ್‌ಎಸ್‌ಎಸ್ ಘಟಕ ಉದ್ಘಾಟಿಸಿ ಮಾತನಾಡಿದರು.`ವಿದ್ಯಾರ್ಥಿಗಳು ನಾಯಕತ್ವ ಗುಣ ಬೆಳೆಸಿಕೊಳ್ಳಬೇಕಾದರೆ ಕೆಲವು ಜವಾಬ್ದಾರಿ ಹೊರಬೇಕು. ಸಾಮಾಜಿಕ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿದರೆ ನಾಯಕತ್ವ ಗುಣ ಸಹಜವಾಗಿಯೇ ಬರುತ್ತದೆ~ ಎಂದು ಸಲಹೆ ನೀಡಿದರು.ಪ್ರಾಂಶುಪಾಲ ಸುಬ್ರಹ್ಮಣ್ಯ ಆಚಾರಿ ಮಾತನಾಡಿ, ಪರೀಕ್ಷೆಯಲ್ಲಿ ಅಂಕ ಗಳಿಕೆ ಮಾತ್ರ ವಿದ್ಯಾರ್ಥಿಗಳಿಗೆ ಮಾನದಂಡವಾಗಬಾರದು.  ಜೀವನದಲ್ಲಿ ಮೌಲ್ಯಗಳನ್ನು ಸಹ ಬೆಳೆಸಿಕೊಳ್ಳಬೇಕು ಎಂದರು.

ಎನ್‌ಎಸ್‌ಎಸ್ ಅಧಿಕಾರಿ ಪ್ರಭಾಕರರೆಡ್ಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಂಜುನಾಥ ರಾವ್, ಉಪನ್ಯಾಸಕರಾದ ಧನಲಕ್ಷ್ಮಿ, ಚಂದ್ರಪ್ಪ, ರಾಮಚಂದ್ರ ಹಾಜರಿದ್ದರು.

 ಹರಿನಾಥ್ ನಿರೂಪಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.