ಸಾಮಾಜಿಕ ನ್ಯಾಯದ ಹರಿಕಾರ ಅರಸು

ಬುಧವಾರ, ಮೇ 22, 2019
29 °C

ಸಾಮಾಜಿಕ ನ್ಯಾಯದ ಹರಿಕಾರ ಅರಸು

Published:
Updated:

ಬೆಳಗಾವಿ: “ಸಾಮಾಜಿಕವಾಗಿ ಶೋಷಿ ತರ ಬಗೆಗಿನ ಕಳಕಳಿ ಹೊಂದಿ ಸಾಮಾ ಜಿಕ ನ್ಯಾಯಕ್ಕಾಗಿ ಕ್ರಾಂತಿಕಾರಿ ಸುಧಾ ರಣೆಗಳನ್ನು ಜಾರಿಗೆ ತಂದ ಕರ್ನಾಟಕದ ಧೀಮಂತ ರಾಜಕಾರಣಿ ದಿವಂಗತ ಡಿ. ದೇವರಾಜ ಅರಸು ಅವರು ಧೀಮಂತ ನಾಯಕರಾಗಿದ್ದರು” ಎಂದು ಸಂಸದ ಸುರೇಶ ಅಂಗಡಿ ಅಭಿಪ್ರಾಯಪಟ್ಟರು.ಜಿಲ್ಲಾ ಆಡಳಿತವು ಸೋಮವಾರ ಹಮ್ಮಿಕೊಂಡಿದ್ದ ದೇವರಾಜ ಅರಸು ಅವರ 97ನೇ ಜಯಂತಿ ಸಮಾರಂಭ ವನ್ನು ಉದ್ಘಾಟಿಸಿ ಮಾತನಾಡಿದ ಅವರು, “ಅರಸು ಅವರ ಉನ್ನತ ಆದರ್ಶಗಳನ್ನು ಅಳವಡಿಸಿಕೊಂಡು ಅವರು ಹಾಕಿಕೊಟ್ಟ ಮಾರ್ಗದಲ್ಲಿ ಸಮೃದ್ಧ ಸಮಾಜ ನಿರ್ಮಾಣಕ್ಕಾಗಿ ನಾವಿಂದು ಮುನ್ನಡೆಯಬೇಕಾಗಿದೆ” ಎಂದು ಹೇಳಿದರು.“ಅರಸು ಅವರು ಮೈಸೂರು ರಾಜ್ಯಕ್ಕೆ ಕರ್ನಾಟಕವೆಂದು ನಾಮಕರಣ ಮಾಡಿದ್ದಾರೆ. ಕರ್ನಾಟಕವನ್ನು ಇಡೀ ದೇಶಕ್ಕೆ ಮಾದರಿಯಾಗುವಂತೆ ಮುನ್ನಡೆಸಿ ಹಿಂದುಳಿದ ವರ್ಗದ ಜನರಿಗೆ ಹಾವನೂರು ವರದಿ ಜಾರಿಗೊಳಿಸು ವುದರ ಮೂಲಕ ಮುಖ್ಯ ವಾಹಿನಿಗೆ ತಂದ ಕೀರ್ತಿ ಅವರಿಗೆ ಸಲ್ಲುತ್ತದೆ. ಭೂ ಸುಧಾರಣೆ ಕಾಯ್ದೆ ಜಾರಿಗೆ ಬಂದಿದ್ದೂ ಇವರ ಆಡಳಿತಾವಧಿ ಯಲ್ಲಿಯೇ” ಎಂದು ಸಂಸದರು ಸ್ಮರಿಸಿದರು.ಮುಖ್ಯ ಅತಿಥಿಗಳಾಗಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ವಿ. ಶಂಕರ, “ಸರ್ವರಿಗೂ ಸಮ ಬಾಳು ಹಾಗೂ ಸರ್ವರಿಗೂ ಸಮಪಾಲು ಎಂಬ ಧ್ಯೇಯ ದೊಂದಿಗೆ ಅನೇಕ ಯೋಜನೆಗಳನ್ನು ಅರಸು ಅವರು ಜಾರಿಗೊಳಿಸಿದ್ದರು” ಎಂದು ಶ್ಲಾಘಿಸಿದರು.ಅಧ್ಯಕ್ಷತೆ ವಹಿಸಿದ್ದ ಶಾಸಕ ಸಂಜಯ ಪಾಟೀಲ, “ಅನೇಕ ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸುವುದರ ಮೂಲಕ ಇಂದಿಗೂ ಸಹ ಜನರ ಮನದಲ್ಲಿ ಅರಸು ಅವರು ಹೆಸರಾಗಿ ಉಳಿದಿದ್ದಾರೆ” ಎಂದರು.ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿ ಕಾರಿ ಸುಳೇಭಾವಿ, ಅರಸು ಅವರ ಸಾಧನೆಗಳ ಕುರಿತು ಮಾತನಾಡಿದರು. ಜಿಲ್ಲಾ ಪಂಚಾಯಿತಿ ಸದಸ್ಯ ವಾಸುದೇವ ಸವತಿಕಾಯಿ, ಕಾಂಬಳೆ, ವಾರ್ತಾ ಇಲಾಖೆ ಉಪ ನಿರ್ದೇಶಕ ಬಸವರಾಜ ಕಂಬಿ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಉಮಾ ಸಾಲಿಗೌಡರ ಹಾಜರಿದ್ದರು.ವಿವಿಧ ಪರೀಕ್ಷೆಗಳಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ಫಲಾ ನುಭವಿಗಳಿಗೆ ಸೌಲಭ್ಯಗಳನ್ನು ಇದೇ ಸಂದರ್ಭದಲ್ಲಿ ವಿತರಿಸಲಾಯಿತು. ಜಿಲ್ಲಾ ಹಿಂದುಳಿದ ವರ್ಗದ ಕಲ್ಯಾಣಾಧಿಕಾರಿ ಪ್ರಕಾಶ ಹರಗಾಪುರ ಸ್ವಾಗತಿಸಿದರು. ಬಸವರಾಜ ಗಾರ್ಗಿ ನಿರೂಪಿಸಿದರು. ಭಾನಸಿ ವಂದಿಸಿದರು.

 

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry