ಮಂಗಳವಾರ, ಏಪ್ರಿಲ್ 20, 2021
32 °C

ಸಾಮಾಜಿಕ ನ್ಯಾಯ- ಅಂಬೇಡ್ಕರ್ ಧ್ಯೇಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಪ್ಪಳ: ಎಲ್ಲರಲ್ಲೂ ಸಾಮಾಜಿಕ ಪ್ರಜ್ಞೆ ಅರಳಬೇಕು ಹಾಗೂ ಸಾಮಾಜಿಕ ನ್ಯಾಯ ಸಾರ್ವತ್ರಿಕವಾಗಬೇಕು ಎನ್ನುವುದೇ ಡಾ.ಬಿ.ಆರ್.ಅಂಬೇಡ್ಕರ್ ಅವರ ಮುಖ್ಯ ಧ್ಯೇಯವಾಗಿತ್ತು ಎಂದು ಸಂಸದ ಶಿವರಾಮಗೌಡ ಹೇಳಿದರು. ಡಾ.ಬಿ.ಆರ್.ಅಂಬೇಡ್ಕರ್ ಅವರ 120ನೇ ಜನ್ಮದಿನೋತ್ಸವದ ಅಂಗವಾಗಿ ನಗರದ ಸಾಹಿತ್ಯ ಭವನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಆಯ್ದ ಫಲಾನುಭವಿಗಳಿಗೆ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿತರಿಸಿ ಮಾತನಾಡಿದರು.ಜಾತಿಪದ್ಧತಿಯ ಕ್ರೌರ್ಯಯಿಂದ ಬಾಲ್ಯದಲ್ಲಿ ನರಳಿದ ಅಂಬೇಡ್ಕರ್, ಶೋಷಿತರಿಗೆ ಸಾಮಾಜಿಕ ನ್ಯಾಯ ಒದಗಿಸಬೇಕು ಎಂಬ ದೃಢಸಂಕಲ್ಪದಿಂದ ದುಡಿದರು ಎಂದು ಅವರು ಅಭಿಪ್ರಾಯಪಟ್ಟರು. ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಸಂಗಣ್ಣ ಕರಡಿ ಮಾತನಾಡಿ, “ಯಾವ ಜನಪ್ರತಿನಿಧಿ ಹಾಗೂ ಅಧಿಕಾರಿಯಿಂದ ನಿಮ್ಮನ್ನು ಉದ್ಧಾರ ಮಾಡಲು ಸಾಧ್ಯವಿಲ್ಲ. ಅಂಬೇಡ್ಕರ್ ಹೇಳಿದಂತೆ ಶಿಕ್ಷಣ ಹಾಗೂ ಸರ್ಕಾರ ರೂಪಿಸಿರುವ ವಿವಿಧ ಯೋಜನೆಗಳ ಸದುಪಯೋಗಪಡಿಸಿಕೊಳ್ಳುವ ಮೂಲಕ ನಿಮ್ಮ ಏಳಿಗೆಯನ್ನು ನೀವೇ ಸಾಧಿಸಬೇಕು” ಎಂದು ಸೂಚಿಸಿದರು.ಇದಕ್ಕೂ ಮುನ್ನ, ಸಂಸದ ಶಿವರಾಮಗೌಡ ಅವರು ಅಂತರ್ಜಾತಿ ವಿವಾಹವಾದ ದಂಪತಿಗೆ ಸಮಾಜ ಕಲ್ಯಾಣ ಇಲಾಖೆ ನೀಡುವ ಪ್ರೋತ್ಸಾಹ ಧನದ ಚೆಕ್ ಹಾಗೂ ಸ್ವಯಂ ಉದ್ಯೋಗ ಕೈಗೊಳ್ಳುವವರಿಗೆ ಸಹಾಯಧನ ಚೆಕ್ ವಿತರಣೆ ಮಾಡಿದರು. ನಗರಸಭೆ ಅಧ್ಯಕ್ಷ ಸುರೇಶ ದೇಸಾಯಿ, ಜಿಲ್ಲಾಧಿಕಾರಿ ಕೆ.ಎಸ್.ಸತ್ಯಮೂರ್ತಿ ಮತ್ತಿತರರು ವೇದಿಕೆಯಲ್ಲಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.