ಶನಿವಾರ, ಜೂನ್ 19, 2021
27 °C
‘ಕರ್ನಾಟಕ ದರ್ಶನ’ಕ್ಕೆ ಶಾಸಕ ಶಾಂತನಗೌಡ ಚಾಲನೆ

ಸಾಮಾನ್ಯ ಜ್ಞಾನಾರ್ಜನೆಗೆ ಶೈಕ್ಷಣಿಕ ಪ್ರವಾಸ ಸಹಕಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊನ್ನಾಳಿ: ಸಾಮಾನ್ಯ ಜ್ಞಾನಾರ್ಜನೆಗೆ ಪ್ರವಾಸಗಳು ಸಹಕಾರಿ ಎಂದು ಶಾಸಕ ಡಿ.ಜಿ.ಶಾಂತನಗೌಡ ಹೇಳಿದರು.

ಪಟ್ಟಣದ ಗುರುಭವನದಲ್ಲಿ ಮಂಗಳವಾರ ಕ್ಷೇತ್ರ ಶಿಕ್ಷಣಾಧಿಕಾರಿ–ಪದನಿಮಿತ್ತ ಯೋಜನಾಧಿಕಾರಿಗಳ ಕಚೇರಿ, ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ಪ್ರವಾಸೋದ್ಯಮ ಇಲಾಖೆ ಸಹಯೋಗ ದಲ್ಲಿ ಹಮ್ಮಿಕೊಂಡ ‘ಕರ್ನಾಟಕ ದರ್ಶನ’ (ಮಕ್ಕಳ ಶೈಕ್ಷಣಿಕ ಪ್ರವಾಸ)ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಶೈಕ್ಷಣಿಕ ಪ್ರವಾಸದ ಸಂದರ್ಭದಲ್ಲಿ ವಿದ್ಯಾರ್ಥಿಗಳು ಶಿಕ್ಷಕರ ಸೂಚನೆಗಳನ್ನು ತಪ್ಪದೇ ಪಾಲಿಸಬೇಕು.  ಯಾವುದೇ ಕಾರಣಕ್ಕೂ ಶೈಕ್ಷಣಿಕ ಪ್ರವಾಸದ ದುರುಪಯೋಗಕ್ಕೆ ಅವಕಾಶ ನೀಡಬಾರದು ಎಂದು ವಿನಂತಿಸಿದರು. ತಮ್ಮ ಮನೆಯವರ ಜತೆ ಯಾವುದಾದರೂ ಪ್ರವಾಸಕ್ಕೆ ಹೋದ ಸಂದರ್ಭದಲ್ಲಿ ಹೇಗೆ ಶಿಸ್ತಿನಿಂದ ವರ್ತಿಸುವುದನ್ನು ರೂಢಿಸಿ ಕೊಂಡಿರುತ್ತೇವೋ ಅದೇ ರೀತಿ ಇಲ್ಲಿಯೂ ವಿದ್ಯಾರ್ಥಿಗಳು ಶಿಸ್ತು ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು.ಈ ಬಾರಿ ಆಯ್ದ ವಿದ್ಯಾರ್ಥಿಗಳಿಗಷ್ಟೇ ಪ್ರವಾಸ ಭಾಗ್ಯ ಲಭಿಸಿದೆ. ಮುಂದಿನ ದಿನಗಳಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೂ ಉಚಿತ ಪ್ರವಾಸದ ಅವಕಾಶ ಕಲ್ಪಿಸಬೇಕು ಎಂಬುದು ತಮ್ಮ ಆಶಯ. ಆ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎಸ್‌.ರಾಜಶೇಖರ್‌ ಮಾತನಾಡಿ, ಪ್ರವಾಸದ ವೇಳೆ ಶಿಕ್ಷಕರ ಜವಾಬ್ದಾರಿ ಹೆಚ್ಚಿನದಾಗಿರುತ್ತದೆ. ಆದ್ದರಿಂದ, ಯಾವುದೇ ಕ್ಷಣದಲ್ಲೂ ಶಿಕ್ಷಕರು ಮೈಮರೆಯಬಾರದು ಎಂದು ಕಿವಿ ಮಾತು ಹೇಳಿದರು.ನಿರ್ದಿಷ್ಟ ವಿದ್ಯಾರ್ಥಿಗಳ ತಂಡದ ಉಸ್ತುವಾರಿ ಹೊತ್ತ ಶಿಕ್ಷಕರು ವಿದ್ಯಾರ್ಥಿಗಳ ನಿಯಮಿತ ಹಾಜರಾತಿ ಬಗ್ಗೆ ಸದಾ ನಿಗಾ ವಹಿಸಬೇಕು ಎಂದರು.ಬಿಆರ್‌ಪಿ ಕೆ.ಮಹಾಂತೇಶ್‌ ಪ್ರಾಸ್ತಾವಿಕ ಮಾತನಾಡಿ, ತಾಲ್ಲೂಕಿನ 28 ಪ್ರೌಢಶಾಲೆಗಳಿಂದ ತಲಾ 5 ವಿದ್ಯಾರ್ಥಿಗಳಂತೆ ಒಟ್ಟು 145 ಹಾಗೂ ಚನ್ನಗಿರಿ ತಾಲ್ಲೂಕಿನ ಶಾಲೆಗಳ 6 ವಿದ್ಯಾರ್ಥಿಗಳು ಸೇರಿ ಒಟ್ಟು 151 ವಿದ್ಯಾರ್ಥಿಗಳಿಗೆ ಈ ಬಾರಿ ಶೈಕ್ಷಣಿಕ ಪ್ರವಾಸ ಭಾಗ್ಯ ಲಭಿಸಿದೆ. ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗಗಳು ಹಾಗೂ ಸಾಮಾನ್ಯ ವರ್ಗದ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಆಯ್ಕೆ ಮಾಡಲಾಗಿದೆ. 151 ವಿದ್ಯಾರ್ಥಿಗಳೊಂದಿಗೆ 12 ಶಿಕ್ಷಕರು ತೆರಳುತ್ತಾರೆ ಎಂದು

ವಿವರಿಸಿದರು.ಶಿಕ್ಷಕಿ ಶೈಲಜಾ ಪ್ರಾರ್ಥಿಸಿದರು. ಪ್ರೌಢಶಾಲಾ ಸಹಶಿಕ್ಷಕರ ಸಂಘದ ತಾಲ್ಲೂಕು ಘಟಕದ ಉಪಾಧ್ಯಕ್ಷ ಎಚ್‌.ಸಿ.ಚಂದ್ರಶೇಖರ್‌ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ಸಿ.ತೀರ್ಥಲಿಂಗಪ್ಪ ವಂದಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.