ಶನಿವಾರ, ಜೂನ್ 19, 2021
26 °C
ಬಿಎಸ್‌ಆರ್ ಕಾಂಗ್ರೆಸ್‌ ಪದಾಧಿಕಾರಿಗಳ ಸಭೆ

ಸಾಮೂಹಿಕವಾಗಿ ಬಿಜೆಪಿ ಸೇರ್ಪಡೆಗೆ ನಿರ್ಧಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಮುಂದಿನ ರಾಜಕೀಯ ಭವಿಷ್ಯ ಕಂಡುಕೊಳ್ಳಲು ಸಾಮೂಹಿಕವಾಗಿ ಬಿಜೆಪಿಗೆ ಸೇರ್ಪಡೆಯಾಗಲು ಭಾನು­ವಾರ ಇಲ್ಲಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಬಿಎಸ್ಆರ್ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳ ಸಭೆಯಲ್ಲಿ ತೀರ್ಮಾನಿಸಲಾಯಿತು.



ಪಕ್ಷದ ರಾಜ್ಯ ಘಟಕದ ಉಪಾಧ್ಯಕ್ಷ ಎಚ್.ವಿ.ಡಂಬಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಬಿಎಸ್‌ಆರ್‌ ಕಾಂಗ್ರೆಸ್‌ನಿಂದ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲನ್ನಪ್ಪಿದ್ದ 26 ಮಂದಿ ಅಭ್ಯರ್ಥಿಗಳು ಸೇರಿದಂತೆ ಪಕ್ಷದ ಪದಾಧಿಕಾರಿಗಳು ಪಾಲ್ಗೊಂಡಿದ್ದರು.



ಕಾರ್ಯಕರ್ತರು ಹಾಗೂ ಪಕ್ಷದ ಪದಾಧಿಕಾರಿಗಳಿಗೆ ಮಾಹಿತಿ ನೀಡದೆ ಬಿಎಸ್‌ಆರ್‌ ಕಾಂಗ್ರೆಸ್‌ನ ಸಂಸ್ಥಾಪಕ ಶ್ರೀರಾಮುಲು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಅವರನ್ನು ಹೊರತುಪಡಿಸಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ್ ಹಾಗೂ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಪ್ರಹ್ಲಾದ ಜೋಶಿ ನೇತೃತ್ವದಲ್ಲಿ ಪಕ್ಷಕ್ಕೆ ಸೇರಲು ನಿರ್ಧರಿಸಲಾಯಿತು. ಸಭೆಯ ನಂತರ ಪಕ್ಷದ ಪದಾಧಿಕಾರಿಗಳು ಜಗದೀಶ ಶೆಟ್ಟರ್ ಹಾಗೂ ಪ್ರಹ್ಲಾದ ಜೋಶಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.



27ರಂದು ಸೇರ್ಪಡೆ

ಸಭೆಯ ತೀರ್ಮಾನದ ಕುರಿತು ‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಎಚ್.ವಿ.ಡಂಬಳ, ಇದೇ 27ರಂದು ಹುಬ್ಬಳ್ಳಿಯಲ್ಲಿ ನಡೆಯುವ ಸಮಾರಂಭ­ದಲ್ಲಿ ಬಿಜೆಪಿಗೆ ಅಧಿಕೃತ ಸೇರ್ಪ­ಡೆ­ಯಾಗಲು ನಿರ್ಧರಿಸಲಾಗಿದೆ ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.