ಸಾಮೂಹಿಕ ಅತ್ಯಾಚಾರ: ಯುವತಿ ಚೇತರಿಕೆ

7

ಸಾಮೂಹಿಕ ಅತ್ಯಾಚಾರ: ಯುವತಿ ಚೇತರಿಕೆ

Published:
Updated:

ನವದೆಹಲಿ (ಪಿಟಿಐ): ಬಸ್‌ನಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ ಯುವತಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯರು ಗುರುವಾರ ತಿಳಿಸಿದ್ದಾರೆ.ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಕೃತಕ ಉಸಿರಾಟ ವ್ಯವಸ್ಥೆಯನ್ನು ಅಳವಡಿಸಿಲ್ಲ , ಯುವತಿ ನಿಧನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಸಫ್ಧರ್‌ಜಂಗ್ ಆಸ್ಪತ್ರೆಯ ಹಿರಿಯ ವೈದ್ಯಾಧಿಕಾರಿ ಬಿ.ಡಿ ಅಥನಿ ತಿಳಿಸಿದ್ದಾರೆ.ಕಳೆದ ನಾಲ್ಕು ದಿನಗಳಿಂದ ಇಲ್ಲಿಯವರೆಗೂ ಎರಡು ಭಾರಿ  ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ. ದೈಹಿಕ ಮತ್ತು ಮಾನಸಿಕವಾಗಿ ಬಳಲಿರುವುದರಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಇನ್ನು ನಾಲ್ಕೈದು ದಿನಗಳ ವಿಶ್ರಾಂತಿ ಬೇಕು ಎಂದು ವೈದ್ಯರು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry