ಮಂಗಳವಾರ, ನವೆಂಬರ್ 12, 2019
19 °C

ಸಾಮೂಹಿಕ ನಾಯಕತ್ವದಡಿ ಚುನಾವಣೆ

Published:
Updated:

ಗಂಗಾವತಿ: ಕಾಂಗ್ರೆಸ್ ಪಕ್ಷವು ಸಾಮೂಹಿಕ ನಾಯಕತ್ವದಡಿ ವಿಧಾನಸಭಾ ಕ್ಷೇತ್ರದ ಚುನಾವಣೆಯನ್ನು ಎದುರಿಸಲಿದೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಎಚ್. ಆರ್. ಶ್ರೀನಾಥ ಹೇಳಿದರು.ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸೇರಲು ವಿವಿಧ ಪಕ್ಷಗಳ ನೂರಾರು ಕಾರ್ಯಕರ್ತರು ಆಗಮಿಸಲಿದ್ದಾರೆ ಎಂದರು.ಬಸವರಾಜ್ ಮಳಿಮಠ, ಸಿಂಗನಾಳ ಪಂಪಾಪತಿ, ಪಕ್ಷದ ನಗರ ಘಟಕದ ಅಧ್ಯಕ್ಷ ಹನುಮಂತಪ್ಪ ನಾಯಕ, ವೀರಭದ್ರಪ್ಪ ನಾಯಕ ಮೊದಲಾದವರು ಉಪಸ್ಥಿತರಿದ್ದರು.ಪೈಪೋಟಿ ನಡೆಸಿ ಟಿಕೆಟ್ ಪಡೆದಿಲ್ಲ

ಗಂಗಾವತಿ: ಬಿಎಸ್‌ಆರ್ ಕಾಂಗ್ರೆಸ್ ಪಕ್ಷದ ಟಿಕೆಟ್ ಪಡೆಯಲು ಪೈಪೋಟಿ ನಡೆಸಿಲ್ಲ. ಲಲಿತಾರಾಣಿ ಶ್ರೀರಂಗದೇವರಾಯಲು ಅವರ ಸಲಹೆ, ಮಾರ್ಗದರ್ಶನದಲ್ಲಿ ಟಿಕೆಟ್ ಪಡೆದಿರುವೆ ಎಂದು ಬಿಎಸ್‌ಆರ್ ಕಾಂಗ್ರೆಸ್‌ನ ನಿಯೋಜಿತ ಅಭ್ಯರ್ಥಿ ಪಂಪನಗೌಡ ಪೊಲೀಸ್ ಪಾಟೀಲ ಹೇಳಿದರು.ಭಾನುವಾರ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ಸಂಸ್ಥಾಪಕ ಬಿ. ಶ್ರೀರಾಮುಲು ದಿ. 19ರಂದು ಬಹಿರಂಗ ಪ್ರಚಾರಕ್ಕೆ ಆಗಮಿಸಲಿದ್ದಾರೆ. ನಟಿ ಪೂಜಾಗಾಂಧಿ ಅವರನ್ನು ಪ್ರಚಾರಕ್ಕೆ ಆಗಮಿಸುವಂತೆ ಕೋರಲಾಗಿದೆ ಎಂದರು.`ಕ್ಷೇತ್ರದ ಅಭಿವೃದ್ಧಿಗೆ ಸದಾ ಬದ್ಧ'

ಗಂಗಾವತಿ: ವಿರೋಧ ಪಕ್ಷಗಳು ಸೋಲಿನ ಭಯದಿಂದ ತಮ್ಮ ಬಗ್ಗೆ ಸಲ್ಲದ ವದಂತಿಗಳನ್ನು ಹಬ್ಬಿಸುತ್ತಿದ್ದು, ಮತದಾರರು ವದಂತಿಗಳಿಗೆ ಕಿವಿಗೊಡಬಾರದು. ಬಿಜೆಪಿ, ಕಾಂಗ್ರೆಸ್ ಪಕ್ಷಗಳು ಶತಾಯಗತಾಯ ಯತ್ನಿಸಿ ಜೆಡಿಎಸ್ ಸೋಲಿಸಲು ಹೆಣಗಾಡುತ್ತಿವೆ.ಇಂಥಹ ಕುತಂತ್ರಗಳ ಬಗೆಗೆ ಮತದಾರರು ಕಿವಿಗೊಡದೆ ಜೆಡಿಎಸ್ ಬೆಂಬಲಿಸಲಿದ್ದಾರೆ. ಗಂಗಾವತಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ತಾವು ಸದಾ ಬದ್ಧ ಎಂದು ಮಾಜಿ ಸಚಿವ, ಜೆಡಿಎಸ್ ನಿಯೋಜಿತ ಅಭ್ಯರ್ಥಿ ಇಕ್ಬಾಲ್ ಅನ್ಸಾರಿ ಹೇಳಿದರು.ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಿಎಸ್‌ಆರ್ ಕಾಂಗ್ರೆಸ್ ಅಭ್ಯರ್ಥಿ ಪಂಪನಗೌಡರನ್ನು ನಾನು ನಿಲ್ಲಿಸಿದ್ದು ಎಂದು ಹೊಸ ವದಂತಿಯನ್ನು ಹರಿಬಿಡಲಾಗಿದೆ. ಇದೆಲ್ಲಾ ಸುಳ್ಳಿನ ಕಂತೆ. ನಾನು ಜಾತಿ, ಮತ, ಧರ್ಮದ ಹೆಸರಲ್ಲಿ ರಾಜಕೀಯ ಮಾಡಿದವನಲ್ಲ. ವಿಶಾಲ ಮನೋಭಾವದ ತಳಹದಿಯ ಮೇಲೆ ರಾಜಕೀಯ ಮಾಡುತ್ತಿರುವೆ ಎಂದು ವಿರೋಧಿಗಳಿಗೆ ತಿರುಗೇಟು ನೀಡಿದರು.ಕೆಜೆಪಿ ಅಭ್ಯರ್ಥಿಯಿಂದ ನಾಮಪತ್ರ

ಕೊಪ್ಪಳ: ಕೊಪ್ಪಳ ವಿಧಾನಸಭಾ ಕ್ಷೇತ್ರದ ಕೆಜೆಪಿ ಅಭ್ಯರ್ಥಿ ಕೆ.ಎಂ.ಸೈಯದ್ ಅವರು ಶನಿವಾರ ನಾಮಪತ್ರ ಸಲ್ಲಿಸಿದರು.ಇಲ್ಲಿನ ತಹಸೀಲ್ದಾರ ಕಚೇರಿಗೆ ತಮ್ಮ ಬೆಂಬಲಿಗರೊಂದಿಗೆ ತೆರಳಿ ಚುನಾವಣಾ ಅಧಿಕಾರಿ ಅಶೋಕ ಕಲಘಟಗಿ ಅವರಿಗೆ ನಾಮಪತ್ರ ಸಲ್ಲಿಸಿದರು.ಪಕ್ಷದ ಮುಖಂಡರಾದ ಅಜ್ಜು ಖಾದರಿ, ಪ್ರಫುಲ್ಲಗೌಡ, ಎನ್.ಎ.ಪಾಟೀಲ ಉಪಸ್ಥಿತರಿದ್ದರು.

ಪ್ರತಿಕ್ರಿಯಿಸಿ (+)