ಸಾಯಿಬಾಬಾ ಆರೋಗ್ಯ ಗಂಭೀರ

7

ಸಾಯಿಬಾಬಾ ಆರೋಗ್ಯ ಗಂಭೀರ

Published:
Updated:
ಸಾಯಿಬಾಬಾ ಆರೋಗ್ಯ ಗಂಭೀರ

ಪುಟ್ಟಪರ್ತಿ (ಐಎಎನ್‌ಎಸ್): ಅಸ್ವಸ್ಥ ರಾಗಿ ಆಸ್ಪತ್ರೆಗೆ ದಾಖಲಾಗಿರುವ ಸತ್ಯ ಸಾಯಿ ಬಾಬಾ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದರೂ ಸ್ಥಿರವಾಗಿಯೇ ಇದೆ ಎಂದು ಚಿಕಿತ್ಸೆ ನೀಡುತ್ತಿರುವ ವೈದ್ಯರು ತಿಳಿಸಿದ್ದಾರೆ.ಸಾಯಿ ಬಾಬಾ ಅವರ ಎಲ್ಲಾ ಅಂಗಗಳು ಸಮರ್ಪಕವಾಗಿಯೇ ಕಾರ್ಯ ನಿರ್ವಹಿಸುತ್ತಿದೆಯಾದರೂ ಯಕೃತ್‌ನ ಕಾರ್ಯನಿರ್ವಹಣೆ ಸಹಜ ಸ್ಥಿತಿಗೆ ಬಂದಿಲ್ಲ. ಸಾಯಿಬಾಬಾ ಅವರ ದೇಹಸ್ಥಿತಿ ಇನ್ನೂ ಗಂಭೀರವಾಗಿಯೇ ಇದ್ದು, ವೈದ್ಯರು ಅವರ ಆರೋಗ್ಯದ ಮೇಲೆ ಸಂಪೂರ್ಣ ನಿಗಾ ವಹಿಸಿದ್ದಾರೆ ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry