ಶುಕ್ರವಾರ, ಮೇ 7, 2021
26 °C

ಸಾರಕ್ಕಿ ಕೆರೆ ಒತ್ತುವರಿ: ವರದಿಗೆ ಆದೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದ ಸಾರಕ್ಕಿ ಕೆರೆ ಒತ್ತುವರಿ ಆಗಿರುವ ಕುರಿತು ಪರಿಶೀಲನೆ ನಡೆಸಿ, ವರದಿ ಸಲ್ಲಿಸುವಂತೆ ಬೆಂಗಳೂರು ದಕ್ಷಿಣ ತಹಶೀಲ್ದಾರ್‌ಗೆ ಹೈಕೋರ್ಟ್ ಶುಕ್ರವಾರ ನಿರ್ದೇಶನ ನೀಡಿದೆ. ಸಾರಕ್ಕಿ ಕೆರೆ ಒತ್ತುವರಿ ಮಾಡಿಕೊಂಡವರ ವಿರುದ್ಧ ಕ್ರಮ ಜರುಗಿಸಬೇಕು ಎಂದು `ನೀರಿನ ಹಕ್ಕಿಗಾಗಿ ಜನಾಂದೋಲನ' ಸಂಸ್ಥೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ಎಚ್. ವಘೇಲಾ ನೇತೃತ್ವದ ವಿಭಾಗೀಯ ಪೀಠ, ಈ ನಿರ್ದೇಶನ ನೀಡಿತು.



ಸಾರಕ್ಕಿ ಕೆರೆ ಈ ಹಿಂದೆ 85 ಎಕರೆ ವಿಸ್ತೀರ್ಣವಾಗಿತ್ತು. ಒತ್ತುವರಿ ಕಾರಣ ಈಗ 35 ಎಕರೆಗೆ ಇಳಿದಿದೆ. ಬಡವ - ಶ್ರೀಮಂತ ಎಂಬ ಭೇದವಿಲ್ಲದೆ, ಜನ ಕೆರೆಗೆ ಸೇರಿದ ಜಮೀನು ಒತ್ತುವರಿ ಮಾಡಿಕೊಂಡಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಲ್ಲಿ ತ್ಯಾಜ್ಯ ಸುರಿಯುತ್ತಿದೆ ಎಂದು ಅರ್ಜಿಯಲ್ಲಿ ದೂರಲಾಗಿದೆ. ವಿಚಾರಣೆಯನ್ನು ಜುಲೈ 10ಕ್ಕೆ ಮುಂದೂಡಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.