ಮಡಿಕೇರಿ: ಗಂಭೀರ ಕಾಯಿಲೆಗಳಿಂದ ಬಳಲುವ ಕಡು ಬಡವರಿಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ನೀಡುವ ರಾಜ್ಯದ ಮಹತ್ವಾಕಾಂಕ್ಷೆ `ವಾಜಪೇಯಿ ಆರೋಗ್ಯಶ್ರೀ~ ಯೋಜನೆಗೆ ವಿರಾಜಪೇಟೆಯಲ್ಲಿ ನ.17ರಂದು ಚಾಲನೆ ದೊರೆಯಲಿದೆ.

ವಿರಾಜಪೇಟೆಯ ಸರ್ಕಾರಿ ಜೂನಿಯರ್ ಕಾಲೇಜಿನ ಮೈದಾನದಲ್ಲಿ ಯೋಜನೆಗೆ ಚಾಲನೆ ನೀಡುವುದರ ಜೊತೆಗೆ ಆರೋಗ್ಯ ತಪಾಸಣೆ ಶಿಬಿರವನ್ನೂ ಆಯೋಜಿಸಲಾಗಿದೆ.

ನಗರದ ಕೋಟೆ ವಿಧಾನಸಭಾಂಗಣದಲ್ಲಿ ಯೋಜನೆ ಕುರಿತು ಹಾಗೂ ಆರೋಗ್ಯ ಶಿಬಿರದ ಬಗ್ಗೆ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರು, ಜಿಲ್ಲಾ ಪಂಚಾಯಿತಿ ಸದಸ್ಯರು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಕಾರ್ಯದರ್ಶಿಗಳಿಗೆ ಮಾಹಿತಿ ನೀಡಲು ಶುಕ್ರವಾರ ಸಭೆ ಕರೆಯಲಾಗಿತ್ತು.

ಸಭೆಯ ಅಧ್ಯಕ್ಷತೆ ವಹಿಸಿದ್ದ ವಿಧಾನಸಭಾಧ್ಯಕ್ಷ ಕೆ.ಜಿ. ಬೋಪಯ್ಯ ಮಾತನಾಡಿ, ಈ ಕಾರ್ಯಕ್ರಮವು ಅತ್ಯಂತ ಮಹತ್ವದ್ದಾಗಿದ್ದು, ಯಶಸ್ಸಿಗೆ ಆರೋಗ್ಯಾಧಿಕಾರಿಗಳ ಜೊತೆ ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿತಿಯ ಪಿಡಿಒ ಹಾಗೂ ಕಾರ್ಯದರ್ಶಿಗಳು ಕೈಜೋಡಿಸಬೇಕು ಎಂದು ಸೂಚಿಸಿದರು.

ಶಿಬಿರದಲ್ಲಿ ಕೇವಲ ಬಿಪಿಎಲ್ಕಾರ್ಡ್ ದಾರರು ಮಾತ್ರವಲ್ಲದೆ, ಬೇರೆ ಜನರು ಸಹ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬಹುದು ಎಂದು ಹೇಳಿದರು.

ಸಚಿವ ಅಪ್ಪಚ್ಚು ರಂಜನ್ ಮಾತನಾಡಿ, ಕಾಯಿಲೆ ಇರುವ ಕಡುಬಡವರು ಬಿಪಿಎಲ್ ಕಾರ್ಡ್ಗೆ ಅರ್ಜಿ ಸಲ್ಲಿಸಿದ್ದರೆ ಅಂತಹವರಿಗೂ ಸ್ಥಳದಲ್ಲಿಯೇ ಬಿಪಿಎಲ್ ಕಾರ್ಡ್ ನೀಡುವ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಡಾ.ಎನ್.ವಿ. ಪ್ರಸಾದ್ ಮಾತನಾಡಿ, ಶಿಬಿರದಲ್ಲಿ ಪಾಲ್ಗೊಳ್ಳಲು ಬರುವ ರೋಗಿಗಳಿಗೆ ಹಾಗೂ ಅವರ ಜೊತೆ ಬರುವ ಕುಟುಂಬದ ಒಬ್ಬ ವ್ಯಕ್ತಿಗೆ ಕೂಡ ಉಪಹಾರ, ಮಧ್ಯಾಹ್ನ ಊಟದ ವ್ಯವಸ್ಥೆ ಮಾಡಲಾಗಿದೆ ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಶಿವಕುಮಾರ್ ಮಾತನಾಡಿ, ಬಡ ರೋಗಿಗಳನ್ನು ಕರೆತರಲು ಜಿಲ್ಲೆಯ ಪ್ರತಿಯೊಂದು ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸರ್ಕಾರಿ ಆಸ್ಪತ್ರೆಗಳಿಂದ ಉಚಿತವಾಗಿ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಇದಕ್ಕಾಗಿ ಕೆಎಸ್ಆರ್ಟಿಸಿ ಬಸ್ಗಳನ್ನು ನಿಯೋಜಿಸಲಾಗಿದೆ ಎಂದರು.

ಕಾರ್ಡ್ ಎಲ್ಲಿ ಸಿಗುತ್ತೆ
ಈ ಯೋಜನೆಯ ಪ್ರಯೋಜನ ಪಡೆಯಲು ಸಮುದಾಯ ಆರೋಗ್ಯ ಕೇಂದ್ರ, ತಾಲ್ಲೂಕು ಇಲ್ಲವೇ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಗಳಲ್ಲಿರುವ ಆರೋಗ್ಯ ಮಿತ್ರರನ್ನು ಸಂಪರ್ಕಿಸಬಹುದು.

ಏನಿದು ಯೋಜನೆ?
ಗ್ರಾಮೀಣ ಪ್ರದೇಶದಲ್ಲಿ ವಾರ್ಷಿಕ 12 ಸಾವಿರ ರೂಪಾಯಿಗಿಂತ ಕಡಿಮೆ ಹಾಗೂ ನಗರ ಪ್ರದೇಶದಲ್ಲಿ ವಾರ್ಷಿಕ 17 ಸಾವಿರ ರೂಪಾಯಿಗಳಿಗಿಂತ ಕಡಿಮೆ ಆದಾಯ ಹೊಂದಿರುವ ಕಡುಬಡವರು (ಬಿಪಿಎಲ್ ಕಾರ್ಡ್ ಹೊಂದಿದವರು) ಗಂಭೀರ ಕಾಯಿಲೆಗಳಿಗೆ ತುತ್ತಾಗಿದ್ದರೆ, ಅಂತಹವರಿಗೆ ಉಚಿತವಾಗಿ ಸೂಪರ್ಸ್ಪೆಶಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವುದು ವಾಜಪೇಯಿ ಆರೋಗ್ಯಶ್ರಿ ಯೋಜನೆಯ ಮುಖ್ಯ ಉದ್ದೇಶ.

ಬಿಪಿಎಲ್ ಕಾರ್ಡ್ನಲ್ಲಿ ಫೋಟೋ ಸಹಿತ ಹೆಸರು ದಾಖಲಾಗಿರುವ ಗರಿಷ್ಠ ಐದು ಮಂದಿಯನ್ನು ಈ ಯೋಜನೆಯಡಿ ಆರೋಗ್ಯ ವಿಮಾ ಯೋಜನೆಯ ವ್ಯಾಪ್ತಿಗೆ ಸೇರ್ಪಡೆ ಮಾಡಿಕೊಳ್ಳಲಾಗುವುದು. ಇಂತಹವರಿಗೆ ಮಾತ್ರ ವಾಜಪೇಯಿ ಆರೋಗ್ಯಶ್ರಿ ಕಾರ್ಡ್ ನೀಡಲಾಗುತ್ತದೆ.

ಈ ಕಾರ್ಡ್ ಪಡೆದವರು ರಾಜ್ಯದ 128 ಖಾಸಗಿ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಗಳಲ್ಲಿ ಗಂಭೀರ ಕಾಯಿಲೆಗಳಿಗೆ ಉಚಿತವಾಗಿ ಚಿಕಿತ್ಸೆ ಪಡೆಯಬಹುದು. ಚಿಕಿತ್ಸೆಯ ಜೊತೆಗೆ ಅವರ ಊಟ, ಸಾರಿಗೆ ವೆಚ್ಚವನ್ನು ಭರಿಸುತ್ತದೆ.

ಹಾಗೆಯೇ, ಮಾತ್ರೆ, ಔಷಧಿ, ವಿವಿಧ ಪರೀಕ್ಷೆಗಳ ವೆಚ್ಚವೂ ಉಚಿತ. ಚಿಕಿತ್ಸೆ ವೇಳೆ ಪತ್ತೆಯಾಗುವ ಇನ್ನೊಂದು ಕಾಯಿಲೆಗೂ ಹೆಚ್ಚುವರಿ ಶುಲ್ಕ ವಿಧಿಸದೆ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತದೆ.

ಕೊಡಗಿನ ನೆರೆಯ ಜಿಲ್ಲೆಗಳಾದ ಮಂಗಳೂರಿನಲ್ಲಿ ಯನಪೊಯ್ ಆಸ್ಪತ್ರೆ, ಎ.ಜೆ. ಆಸ್ಪತ್ರೆ, ಕೆ.ಎಸ್. ಹೆಗ್ಡೆ ಸ್ಮಾರಕ ಆಸ್ಪತ್ರೆ, ಮಂಗಳ ಆಸ್ಪತ್ರೆ ಹಾಗೂ ಮೈಸೂರಿನ ವಿಕ್ರಂ ಆಸ್ಪತ್ರೆ, ಅಪೋಲೋ ಆಸ್ಪತ್ರೆ, ಭಾರತ್ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಈ ಸೌಲಭ್ಯ ಪಡೆಯಬಹುದು.

ಒಂದು ವರ್ಷದಲ್ಲಿ ಬಿಪಿಎಲ್ ಕುಟುಂಬದ ಐದು ಮಂದಿ ಸದಸ್ಯರು ಗರಿಷ್ಠ 1.50 ಲಕ್ಷ ರೂಪಾಯಿಗಳ ಮೊತ್ತದಷ್ಟು ಚಿಕಿತ್ಸೆ ಪಡೆದುಕೊಳ್ಳಬಹುದು.

ಯಾವ ಕಾಯಿಲೆಗೆ ಚಿಕಿತ್ಸೆ?
ಹೃದಯಕ್ಕೆ ಸಂಬಂಧಿಸಿದ ರೋಗಗಳು, ಕ್ಯಾನ್ಸರ್ ಮತ್ತು ಕಿವೋಥೆರಪಿ, ನರರೋಗ, ಮೂತ್ರಪಿಂಡದ ತೊಂದರೆ, ಮೂತ್ರ ರೋಗ, ಸುಟ್ಟಗಾಯ, ಅಪಘಾತ (ಮೋಟಾರು ವಾಹನಗಳ ಅಪಘಾತ ಹೊರತು ಪಡಿಸಿ), ನವಜಾತ ಶಿಶುಗಳಿಗೆ ಸಂಬಂಧಿಸಿದ ಗಂಭೀರ ಕಾಯಿಲೆಗಳು, ತೀವ್ರ ತರಹದ ಗಾಯಗಳು ಇದರ ವ್ಯಾಪ್ತಿಗೆ ಒಳಪಡುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.