ಶುಕ್ರವಾರ, ಮೇ 27, 2022
31 °C

ಸಾರಿಗೆ ನೌಕರರ ವೇತನ ಹೆಚ್ಚಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಮತ್ತು ಬೆಂಗಳೂರು ಮಹಾನಗರ ಸಾರಿಗೆ ನಿಗಮದ (ಬಿಎಂಟಿಸಿ) ನೌಕರರ ವೇತನವನ್ನು ಶೇ 10ರಷ್ಟು ಹೆಚ್ಚು ಮಾಡಲು ಹಣಕಾಸು ಇಲಾಖೆ ಸಮ್ಮತಿ ಸೂಚಿಸಿದೆ.ಏಪ್ರಿಲ್ 1ರಿಂದ ಪೂರ್ವಾನ್ವಯ ಆಗುವಂತೆ ವೇತನ ಪರಿಷ್ಕರಣೆ ಆಗಲಿದೆ. ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಲಾಭದಲ್ಲಿವೆ. ಈ ಕಾರಣಕ್ಕೆ ಈ ಸಂಸ್ಥೆಗಳ ಸಿಬ್ಬಂದಿಯ ಮೂಲವೇತನದಲ್ಲಿ ಶೇ 10ರಷ್ಟು ಹೆಚ್ಚಾಗಲಿದೆ. ಇವರಿಗೆ ಈಗಿರುವ ತುಟ್ಟಿಭತ್ಯೆ ಮುಂದುವರಿಯಲಿದೆ ಎಂದು ಹಣಕಾಸು ಇಲಾಖೆ ಮೂಲಗಳು ತಿಳಿಸಿವೆ.ಈಶಾನ್ಯ ಮತ್ತು ವಾಯವ್ಯ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳು ನಷ್ಟದಲ್ಲಿರುವ ಕಾರಣ, ಅದರಲ್ಲಿ ಕೆಲಸ ನಿರ್ವಹಿಸುವ ಸಿಬ್ಬಂದಿಯ ವೇತನವನ್ನು ಶೇ 9ರಷ್ಟು ಹೆಚ್ಚು ಮಾಡಲು ಅನುಮತಿ ನೀಡಲಾಗಿದೆ.ಹಣಕಾಸು ಇಲಾಖೆ ಸೂಚಿಸಿದ ಸಮ್ಮತಿಯ ಆಧಾರದ ಮೇಲೆ ಸಾರಿಗೆ ಇಲಾಖೆ ವೇತನ ಪರಿಷ್ಕರಣೆ ಕುರಿತ ಆದೇಶವನ್ನು ಒಂದೆರಡು ದಿನದಲ್ಲಿ ಹೊರಡಿಸಲಿದೆ ಎಂದು ಸಚಿವಾಲಯದ ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.