ಶುಕ್ರವಾರ, ಆಗಸ್ಟ್ 6, 2021
21 °C

ಸಾರಿಗೆ ಸೌಲಭ್ಯದ ನಿರೀಕ್ಷೆಯಲ್ಲಿ ಗ್ರಾಮಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೆಂಭಾವಿ: ಪಟ್ಟಣದ ಸುತ್ತಲಿನ ಹಲವಾರು ಹಳ್ಳಿಗಳಲ್ಲಿ ಬಸ್‌ಗಳದ್ದೇ ಬಹುದೊಡ್ಡ ಸಮಸ್ಯೆಯಾಗಿದೆ.ಗ್ರಾಮೀಣ ಸಾರಿಗೆ ವ್ಯವಸ್ಥೆ ಸುಧಾರಣೆಯಾಗಬೇಕೆಂದು ರಾಜ್ಯ ಸರ್ಕಾರ ಸಾಕಷ್ಟು ವ್ಯವಸ್ಥೆ ಮಾಡಿದ್ದರೂ ಈ ವಿಷಯದಲ್ಲಿ ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆ ಯಾದಗಿರಿ ಉಪ ವಿಭಾಗ ವಿಫಲಗೊಂಡಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಸುತ್ತಲಿನ ಕೆಲವು ಗ್ರಾಮಗಳಿಗೆ ಇಂದಿಗೂ ಬಸ್ ಸೌಕರ್ಯ ಸಿಕ್ಕಿಲ್ಲ. ಈ ಗ್ರಾಮಗಳ ಜನರಿಗೆ ಖಾಸಗಿ ವಾಹನಗಳೇ ಆಸರೆಯಾಗಿವೆ.ಖಾಸಗಿ ವಾಹನಗಳ ಸಂಖ್ಯೆಯೂ ಕಡಿಮೆ ಇರುವುದರಿಂದ ನಾಗರಿಕರು ಟಾಪ್ ಮೇಲೆ ಕುಳಿತು ಪ್ರಯಾಣಿಸುವಂತಾಗಿದೆ. ಜೀವದ ಹಂಗು ತೊರೆದು ಪ್ರಯಾಣಿಸುವುದು ಅನಿವಾರ್ಯವಾಗಿದೆ.ಯಾದಗಿರ ಗ್ರಾಮೀಣ ಸಾರಿಗೆ ವ್ಯವಸ್ಥೆ ಸರಿಪಡಿಸಿ ಗ್ರಾಮೀಣ ಜನರಿಗೆ ಅನುಕೂಲವಾಗುವಂತೆ ಉತ್ತಮ ಗುಣಮಟ್ಟದ ಹೊಸ ಬಸ್‌ಗಳನ್ನು ಓಡಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಅಕ್ಬರ್ ನಾಲತ್ವಾಡ ಆಗ್ರಹಿಸಿದ್ದಾರೆ.ಈ ಭಾಗದಲ್ಲಿ ಸಂಚರಿಸುವ ಯಾದಗಿರಿ, ಶಹಾಪುರ, ಸುರಪುರ ಘಟಕದ ಬಸ್‌ಗಳಿಗೆ ಬ್ರೇಕ್, ಮೇನ್ ಫಾಟಕ್, ಟಾಯರ್ ಟ್ಯೂಬ್, ಕಿಟಕಿಗಳಿಗೆ ಗ್ಲಾಸ್‌ಗಳಿಲ್ಲ. ಆಸನಗಳ ವ್ಯವಸ್ಥೆ ಸರಿಯಿಲ್ಲ. ಮಳೆಗಾಲದಲ್ಲಿ ಛಾವಣಿ ಸೋರುತ್ತದೆ. ಹೊಲಸು ತುಂಬಿರುತ್ತದೆ. ಹೀಗಿರುವ ಬಸ್‌ಗಳಿಗೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಓಡಿಸಲು ಮತ್ತೆ ಪರವಾನಿಗೆ ನೀಡಿರುವುದು ಆಶ್ಚರ್ಯದ ಸಂಗತಿ ಎಂದು ತಿಳಿಸಿದ್ದಾರೆ.ಹೀಗಿರುವಾಗ ಜನರಿಗೆ ಒಳ್ಳೆಯ ಸಾರಿಗೆ ವ್ಯವಸ್ಥೆ ಕಲ್ಪಿಸಲು ಹೇಗೆ ಸಾಧ್ಯ. ಹೀಗಾದರೆ ಗ್ರಾಮೀಣ ಪ್ರದೇಶದ ಜನರು ಉತ್ತಮ ಬಸ್‌ಗಳಲ್ಲಿ ಓಡಾಡುವುದು ಯಾವಾಗ, ರಸ್ತೆಗಳು ಸರಿಯಾಗಲಿ ಉತ್ತಮ ಬಸ್ ಓಡಿಸುತ್ತೇವೆ ಎಂದು ಭರವಸೆ ನೀಡಿದ್ದ ಅಧಿಕಾರಿಗಳು, ರಸ್ತೆ ದುರಸ್ತಿಯಾದರೂ ಹೊಸ ಬಸ್‌ಗಳನ್ನು ಓಡಿಸುತ್ತಿಲ್ಲ. ಉತ್ತಮ ಗುಣಮಟ್ಟದ ಎಲ್ಲ ಸೌಲಭ್ಯಗಳಿರುವ ಬಸ್ ನೀಡುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಆಗ್ರಹಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.