ಶನಿವಾರ, ಜನವರಿ 18, 2020
27 °C

ಸಾರ್ವಜನಿಕ ಮಾಹಿತಿ ಆಂದೋಲನ ಮುಕ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಹೊಸ ಭೂಸ್ವಾಧೀನ ಕಾಯ್ದೆಯು (2014) ಜನವರಿ ಯಿಂದ ಜಾರಿಗೆ ಬರಲಿದ್ದು, ಭೂಮಾ ಲೀಕರ ರಕ್ಷಣೆಗೆ ಮತ್ತಷ್ಟು ಒತ್ತು ನೀಡಲಿದೆ ಎಂದು ಜಿಲ್ಲೆಯ ವಿಶೇಷ ಭೂಸ್ವಾಧೀನ ಅಧಿಕಾರಿ ಜಯಮಾ ಧವ ತಿಳಿಸಿದರು.ಸರ್ಕಾರಿ ಜೂನಿಯರ್‌ ಕಾಲೇಜು ಮೈದಾನದಲ್ಲಿ ಕೇಂದ್ರ ಸರ್ಕಾರದ  ವಾರ್ತಾ ಶಾಖೆ, ಕೇಂದ್ರ ಸಮಾಚಾರ ಮತ್ತು ಪ್ರಸಾರ ಸಚಿವಾಲಯದ ಅನ್ಯ ಮಾಧ್ಯಮ ಘಟಕಗಳು ಹಾಗೂ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಜಂಟಿಯಾಗಿ ಹಮ್ಮಿಕೊಂಡಿದ್ದ ಮೂರು ದಿನಗಳ ಭಾರತ್‌ ನಿರ್ಮಾ ಣ್‌ ಸಾರ್ವಜನಿಕ ಮಾಹಿತಿ ಆಂದೋ ಲನದ ಕೊನೆಯ ದಿನವಾದ ಸೋಮ ವಾರ ಅವರು ಮಾತನಾಡಿದರು.ನೂತನ ಕಾಯ್ದೆಯಿಂದ ಭೂಮಾಲೀ ಕರಿಗೆ ಹೆಚ್ಚು ಪರಿಹಾರ ದೊರೆಯು ತ್ತದೆ. ಅಲ್ಲದೆ ಸರ್ಕಾರ ನೀಡುವ ಪರಿಹಾರವನ್ನು ಭೂ ಮಾಲೀಕರು ಒಪ್ಪದಿದ್ದಾಗ ಅವರ ಬೇಡಿಕೆಯನ್ನು ಪರಿಗಣಿಸಲು ಕಾಯ್ದೆಯು ಆದ್ಯತೆ ನೀಡಲಿದೆ ಎಂದು ಅವರು ಹೇಳಿದರು.ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ವ್ಯವಸ್ಥಾಪಕ ವೇಣು ಗೋಪಾಲ್ ಮಾತನಾಡಿ, ಕಡುಬ ಡವರ ಹಸಿವನ್ನು ನೀಗಿಸಲು ಕೇಂದ್ರ ಸರ್ಕಾರ ಆಹಾರ ಭದ್ರತಾ ಕಾಯ್ದೆ ಯನ್ನು ಜಾರಿಗೆ ತಂದಿದೆ. ಹಸಿದ ಹೊಟ್ಟೆಗೆ ಅನ್ನವನ್ನು ನೀಡುವುದೇ ಈ ಯೋಜನೆಯ ಪ್ರಮುಖ ಗುರಿ ಎಂದರು.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎನ್. ರಘುನಾಥ್ ಮಾತನಾಡಿ, ತಾಯಿ ಮತ್ತು ಶಿಶು ಮರಣ ಕಡಿಮೆಗೊಳಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿಯಾನ ಜಾರಿಗೊಳಿಸಿದ್ದು, 2019ರವರೆಗೂ ಜಾರಿಯಲ್ಲಿರುತ್ತದೆ. ಸಕ್ರಿಯವಾಗಿ ನಡೆಯುತ್ತಿರುವ ಲಸಿಕಾ ಕಾರ್ಯಕ್ರಮಗಳಿಗೆ ಜಿಲ್ಲೆ ಮತ್ತು ರಾಜ್ಯದಲ್ಲಿ ಶಿಶು ಮರಣ ಪ್ರಮಾಣ ಕಡಿಮೆ ಇದೆ ಎಂದು ಅವರು ಮಾಹಿತಿ ನೀಡಿದರು.ಚನ್ನಪಟ್ಟಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ, ಪ್ರೊ. ಮಾಯ್ಗೆ ಗೌಡ, ಮೈಸೂರು ವಿಭಾಗದ ಕ್ಷೇತ್ರ ಪ್ರಚಾರ ಅಧಿಕಾರಿ ಎನ್.ಡಿ. ಪ್ರಸಾದ್ ಮಾತನಾಡಿದರು. ಕೇಂದ್ರ ವಾರ್ತಾ ಶಾಖೆಯ ಹೆಚ್ಚುವರಿ ಮಹಾ ನಿರ್ದೇ ಶಕ ಎಸ್. ವೆಂಕಟೇಶ್ವರ್, ಕ್ಷೇತ್ರ ಪ್ರಚಾರಾಧಿಕಾರಿ ಜಿ. ತುಕಾರಾಂ ಗೌಡ,  ಪಿಐಬಿ ಅಧಿಕಾರಿಗಳಾದ ಶ್ರೀನಿವಾಸ್, ಎಚ್. ಶ್ರೀನಿವಾಸ್ ಉಪಸ್ಥಿತರಿದ್ದರು. ಕ್ಷೇತ್ರ ಪ್ರದರ್ಶನಾಧಿಕಾರಿ, ಪಿ.ಜಿ. ಪಾಟೀಲ್ ನಿರೂಪಿಸಿದರು.

ಪ್ರತಿಕ್ರಿಯಿಸಿ (+)