ಗುರುವಾರ , ಮೇ 26, 2022
23 °C

ಸಾರ್ವತ್ರಿಕ ಚುನಾವಣೆಗೆ ಸಜ್ಜಾಗಲು ಕರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ಶಿಕ್ಷಕರ ಮತ್ತು ಪದವೀಧರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವು ಕಾರ್ಯಕರ್ತರ ಮತ್ತು ಮುಖಂಡರ ಗೆಲುವಾಗಿದೆ ಎಂದು ಪದವೀಧರ ಕ್ಷೇತ್ರದ ವಿಜೇತ ಅಭ್ಯರ್ಥಿ ಡಿ.ಎಚ್. ಶಂಕರಮೂರ್ತಿ ಅಭಿಪ್ರಾಯಪಟ್ಟರು.ನಗರದ ಕ್ರೀಡಾ ಸಭಾಂಗಣದಲ್ಲಿ ಬುಧವಾರ ನಡೆದ ಬಿಜೆಪಿ ಜಿಲ್ಲಾ ಘಟಕದ ಕಾರ್ಯಕರ್ತರ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.ಶಿಕ್ಷಕರ ಮತ್ತು ಪದವೀಧರ ಚುನಾವಣೆಯಲ್ಲಿ ಐದು ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಅದೇ ರೀತಿ ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಪಕ್ಷಕ್ಕೆ ದುಡಿಯುವ ಅಗತ್ಯವಿದೆ ಎಂದರು.

ಕಳೆದ ಬಾರಿಯ ಚುನಾವಣೆಯಲ್ಲಿ ನಾಲ್ಕು ಸ್ಥಾನಗಳಲ್ಲಿ ಗೆಲುವು ಸಾಧಿಸಲಾಗಿತ್ತು. ಆಗ ಸಮ್ಮಿಶ್ರ ಸರ್ಕಾರ ಇತ್ತು. ಆದರೆ, ಈಗ ಪೂರ್ಣ ಪ್ರಮಾಣದ ಸರ್ಕಾರ ರಚನೆಯಾದಗಿನಿಂದ ಹಲವಾರು ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿದೆ. ಬಿಜೆಪಿ ವಿದ್ಯಾಮಾನಗಳ ಬಗ್ಗೆ ಯಾವುದೇ ರೀತಿಯ ಅಭಿಪ್ರಾಯವನ್ನು ವ್ಯಕ್ತಪಡಿಸದೇ ಮತದಾರರು ಸರ್ಕಾರದ ಅಭಿವೃದ್ಧಿ ಗಮನಿಸಿ ಮತ ನೀಡಿದ್ದಾರೆ ಎಂದು ಸಮರ್ಥಿಸಿಕೊಂಡರು.ಮುಂದಿನ ಏಪ್ರಿಲ್‌ನಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಮತದಾರರಿಗೆ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ತಿಳಿಸುವ ಕಾರ್ಯ ಈಗಿನಿಂದಲೇ ಆರಂಭವಾಗಬೇಕಿದೆ. ಗ್ರಾಮಾಂತರ ಪ್ರದೇಶದಲ್ಲಿ ಹೆಚ್ಚಿನ ತಿಳುವಳಿಕೆ ಮೂಡಿಸಲು ಕಾರ್ಯಕರ್ತರು ಮುಂದಾಗಬೇಕು ಎಂದು ಸಲಹೆ ನೀಡಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದೇಶ್‌ಯಾದವ್ ಅಧ್ಯಕ್ಷತೆ ವಹಿಸಿದ್ದರು.ವಿಧಾನ ಪರಿಷತ್ ಮುಖ್ಯ ಸಚೇತಕ ಡಾ.ಎ.ಎಚ್. ಶಿವಯೋಗಿಸ್ವಾಮಿ, ವಿಧಾನ ಪರಿಷತ್‌ಗೆ ಆಯ್ಕೆಯಾದ ವೈ.ಎ. ನಾರಾಯಣಸ್ವಾಮಿ, ಗಣೇಶ್ ಕಾರ್ಣಿಕ್, ಶಾಸಕ ತಿಪ್ಪೇಸ್ವಾಮಿ, ವಿಧಾನ ಪರಿಷತ್ ಸದಸ್ಯ  ಜಿ.ಎಚ್. ತಿಪ್ಪಾರೆಡ್ಡಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಪಿ. ಗುರುರಾಜ್, ರೈತ ಘಟಕದ ಖಂಜಾಚಿ ಜಿ.ಎಂ. ಸುರೇಶ್, ಎಸ್. ಮೋರ್ಚಾದ ದಾಸರಿ ಕೀರ್ತಿಕುಮಾರ್, ಜಿ.ಎಂ. ಸುರೇಶ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.