ಭಾನುವಾರ, ಜನವರಿ 26, 2020
20 °C

ಸಾಲ, ಬಡ್ಡಿ ಮನ್ನ: ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಲ್ಬರ್ಗ: ಅತಿವೃಷ್ಟಿ ಹಾಗೂ ಅನಾವೃಷ್ಟಿ, ಕೃಷಿ ಉತ್ಪನ್ನಗಳಿಗೆ ಬೆಲೆ ಕುಸಿತ ಇತ್ಯಾದಿ ಸಮಸ್ಯಗಳಿಂದ ನೊಂದು ಆತ್ಮಹತ್ಯೆಗೆ ಶರಣಾಗುತ್ತಿರುವ ರೈತ ಬವಣೆಯನ್ನು ಕಂಡು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಾಲಮೊತ್ತ ಹಾಗೂ ಬಡ್ಡಿಯನ್ನು ಮನ್ನಾ ಮಾಡಬೇಕು ಎಂದು ಕೃಷಿ ಪಂಡಿತ ಪ್ರಶಸ್ತಿ ಪುರಸ್ಕೃತ ಆದಿನಾಥ ಎಚ್‌. ಹೀರಾ ರುದ್ರವಾಡಿ ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ಚುನಾಯಿತ ಪ್ರತಿನಿಧಿಗಳು ಅಧಿವೇಶನ ಹಾಗೂ ಸಂಪುಟದ ಒಂದೇ ಸಭೆಯಲ್ಲಿ ತಮ್ಮ ವೇತನ , ಭತ್ಯೆ ಇತ್ಯಾದಿಗಳನ್ನು ದುಪ್ಪಟ್ಟು ಮಾಡಿಕೊಳ್ಳುತ್ತಾರೆ. ಆದರೆ ರೈತರ ಹಿತರಕ್ಷಣೆಗೆ ಅಷ್ಟು ಬೇಗ ಸ್ಪಂಧಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿರುವ ಅವರು , ಸರ್ಕಾರಗಳು ಈಗಲಾದರೂ ಎಚ್ಚೆತ್ತುಕೊಳ್ಳದಿದ್ದರೆ ರೈತ ಸಂಘಟನೆಗಳು, ಸಮಾನ ಮನಸ್ಕ ಸಂಘಟನೆಗಳು ಉಗ್ರಹೋರಾಟ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಪ್ರತಿಕ್ರಿಯಿಸಿ (+)