ಭಾನುವಾರ, ಜೂನ್ 20, 2021
28 °C

ಸಾಲ ಬಾಧೆ: ರೈತ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮದ್ದೂರು: ಸಾಲದ ಬಾಧೆ ತಾಳಲಾರದೆ ರೈತ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಮೀಪದ ವಳೆಗೆರೆಹಳ್ಳಿಯಲ್ಲಿ ಭಾನುವಾರ ನಡೆದಿದೆ.ಗ್ರಾಮದ ಕರಿನಾಥೇಗೌಡರ ಮಗ ಸತೀಶ್ (40) ನೇಣಿಗೆ ಶರಣಾದ ರೈತ. ಇವರು ಕೃಷಿಗೆಂದು ಗ್ರಾಮದ ಪತ್ತಿನ ಸಹಕಾರ ಸಂಘದಿಂದ 35 ಸಾವಿರ ರೂಪಾಯಿ ಸಾಲ ಪಡೆದಿದ್ದರು. ಅಲ್ಲದೆ ಜಮೀನಿನ ಕ್ರಯ ಕರಾರು ಮೇಲೆ ಖಾಸಗಿಯವರಿಂದ 3.15 ಲಕ್ಷ ರೂಪಾಯಿ ಸಾಲ ಪಡೆದಿದ್ದರು.ಸಾಲಗಾರರ ಉಪಟಳ ಹೆಚ್ಚಿದ್ದರಿಂದ ಭಾನುವಾರ ಬೆಳಿಗ್ಗೆ 8.30ರ ಸಮಯದಲ್ಲಿ ಮನೆಯ ಕೊಠಡಿಯ ತೊಲೆಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡರು ಎನ್ನಲಾಗಿದೆ. ಅವರಿಗೆ ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳು ಇದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.