ಸೋಮವಾರ, ಏಪ್ರಿಲ್ 12, 2021
25 °C

ಸಾಲ ಮನ್ನಾ ಅಧಿಕೃತ ಆದೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರೈತರ ಬೆಳೆ ಸಾಲ ಮನ್ನಾ ಯೋಜನೆಗೆ ಸಚಿವ ಸಂಪುಟ ಸಭೆ ಗುರುವಾರ ಒಪ್ಪಿಗೆ ಕೊಟ್ಟ ಬೆನ್ನಲ್ಲೇ, ಸರ್ಕಾರದ ಅಧಿಕೃತ ಆದೇಶ ಕೂಡ ಹೊರಬಿದ್ದಿದೆ.2011ರ ಆಗಸ್ಟ್ 1ರಿಂದ 2012ರ ಜುಲೈ 25ರವರೆಗಿನ ಅವಧಿಯಲ್ಲಿ ಸಹಕಾರ ಸಂಘಗಳಿಂದ ರೈತರು ಪಡೆದಿರುವ ರೂ  25 ಸಾವಿರವರೆಗಿನ ಬೆಳೆ ಸಾಲ ಮನ್ನಾ ಮಾಡುವ ಪ್ರಸ್ತಾವಕ್ಕೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿತು. ಒಪ್ಪಿಗೆ ಸಿಕ್ಕ ತಕ್ಷಣವೇ ಸಹಕಾರ ಇಲಾಖೆ ಅಧಿಕೃತ ಆದೇಶ ಕೂಡ ಹೊರಡಿಸಿದೆ. ಒಟ್ಟು 15.64 ಲಕ್ಷ ರೈತರಿಗೆ ಇದರಿಂದ ಪ್ರಯೋಜನ ಆಗಲಿದೆ. ಒಟ್ಟು ರೂ 3,449 ಕೋಟಿ  ಸಾಲದ ಮೊತ್ತವನ್ನು ಸರ್ಕಾರ ಭರಿಸಲಿದೆ.ರೂ 25 ಸಾವಿರಕ್ಕಿಂತ ಹೆಚ್ಚು ಸಾಲ ಪಡೆದವರು, 2013ರ ಜೂನ್ 30 ಅಥವಾ ಸಾಲ ಮರುಪಾವತಿಯ ನಿರ್ದಿಷ್ಟ ದಿನಾಂಕ ಇದರಲ್ಲಿ ಯಾವುದು ಮೊದಲೋ ಆ ವೇಳೆಯೊಳಗೆ ಉಳಿದ ಸಾಲ ಮರುಪಾವತಿ ಮಾಡಬೇಕು. ಹಾಗೆ ಮರುಪಾವತಿ ಮಾಡಿದವರಿಗೆ ಸಾಲ ಮನ್ನಾದ ಪ್ರಯೋಜನ ಸಿಗಲಿದೆ ಎಂದು ಆದೇಶದಲ್ಲಿ ವಿವರಿಸಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.