ಗುರುವಾರ , ಫೆಬ್ರವರಿ 25, 2021
18 °C
ಸಚಿವ ಕೃಷ್ಣಬೈರೇಗೌಡ ಭರವಸೆ

ಸಾವಯವ ಉತ್ಪನ್ನಗಳಿಗೆ ಪ್ರೋತ್ಸಾಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಾವಯವ ಉತ್ಪನ್ನಗಳಿಗೆ ಪ್ರೋತ್ಸಾಹ

ಬೆಂಗಳೂರು: ‘ಸಾವಯವ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವ ಉದ್ದೇಶದಿಂದ ನಗರದಲ್ಲಿ ಸಾವಯವ ಉತ್ಪನ್ನಗಳ ಮಾರಾಟ ಮಳಿಗೆಗಳನ್ನು ತೆರೆಯಲಾ ಗುವುದು’ ಎಂದು ಕೃಷಿ ಸಚಿವ ಕೃಷ್ಣ ಬೈರೇಗೌಡ ಹೇಳಿದರು.



ಜೈವಿಕ್‌ ಕೃಷಿಕ್‌ ಸೊಸೈಟಿಯು ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಸಹಯೋಗದಲ್ಲಿ ಸಂಜಯನಗರದಲ್ಲಿ ತೆರೆದಿರುವ ‘ಜೈವಿಕ್ ಮಾಲ್‌’ ಸಾವಯವ ಉತ್ಪನ್ನಗಳ ಮಾರಾಟ ಮಳಿಗೆಯನ್ನು ಗುರುವಾರ ಉದ್ಘಾಟಿಸಿ  ಅವರು ಮಾತನಾಡಿದರು.



‘ಸಾವಯವ ಕೃಷಿಗೆ ಪ್ರೋತ್ಸಾಹ ನೀಡುವುದರ ಜೊತೆಗೆ ಸಾವಯವ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿ ಸುವುದು ಸಹ ಅಷ್ಟೆ ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ಸಾವಯವ ಮಳಿಗೆಗಳನ್ನು ತೆರೆಯಲಾಗುತ್ತಿದೆ.ಪ್ರಾಥಮಿಕ ಹಂತದಲ್ಲಿ ಸಂಜಯನಗರದಲ್ಲಿ ಮಳಿಗೆಯನ್ನು ತೆರೆಯಲಾಗಿದ್ದು, ಫೆ.19ರಂದು ಬನಶಂಕರಿ ಮತ್ತು ಈ ತಿಂಗಳ ಕೊನೆಯ ವಾರದಲ್ಲಿ ನಂದಿನಿ ಲೇಔಟ್‌ನಲ್ಲಿ ಮಳಿಗೆಗಳು ಆರಂಭವಾಗಲಿವೆ’ ಎಂದು ಹೇಳಿದರು.



ನಗರ ಪ್ರದೇಶಗಳಲ್ಲಿ ಸಾವಯವ ಉತ್ಪನ್ನಗಳಿಗೆ ಹೆಚ್ಚಿನ ಬೇಡಿಕೆ ಇದೆ. ಆದ್ದರಿಂದ ಹಾಪ್‌ಕಾಮ್ಸ್ ಮಳಿಗೆಗಳಲ್ಲಿ ‘ಸಾವಯವ ಕಾರ್ನ್‌ರ್‌’ಗಳನ್ನು ತೆರೆಯ ಲಾಗಿದ್ದು, ಅಲ್ಲಿಯೂ ಸಾವ ಯವ ಉತ್ಪನ್ನಗಳನ್ನು ಮಾರಾಟ ಮಾಡಲಾ ಗುವುದು. ಆ ಮೂಲಕ ಸಾವಯವ ಉತ್ಪನ್ನಗಳಿಗೆ ಮಾರಾಟಕ್ಕೆ  ಹೆಚ್ಚಿನ ಪ್ರೋತ್ಸಾಹ ನೀಡಲಾಗುವುದು  ಎಂದು ತಿಳಿಸಿದರು.



ಜೈವಿಕ್‌ ಕೃಷಿಕ್‌ ಸೊಸೈಟಿಯ ಅಧ್ಯಕ್ಷ ಡಾ.ಕೆ.ರಾಮಕೃಷ್ಣಪ್ಪ ಮಾತನಾಡಿ, ಸ್ಥಗಿತಗೊಂಡಿದ್ದ ಹಾಪ್‌ಕಾಮ್ಸ್‌ ಮಳಿಗೆಗಳಲ್ಲಿ ‘ಜೈವಿಕ್‌ ಮಳಿಗೆ’ಗಳನ್ನು ತೆರೆಯಲಾಗುತ್ತಿದೆ. ಸಂಜಯನಗರದಲ್ಲಿ ತೆರೆಯಲಾಗುತ್ತಿರುವ ಮಳಿಗೆಯಲ್ಲಿ  374 ಬಗೆಯ ಸಾವಯವ ಉತ್ಪನ್ನಗಳು ಗ್ರಾಹಕರಿಗೆ ಲಭ್ಯವಾಗಲಿವೆ ಎಂದು ತಿಳಿಸಿದರು.



ಸಾವಯವ ಉತ್ಪನ್ನಗಳಿಗೆ ಮಾರು ಕಟ್ಟೆ ಒದಗಿಸುವ ಉದ್ದೇಶದಿಂದ ನೆಲ ಮಂಗಲದ ಬಳಿ ಸಾವಯವ ಉತ್ಪನ್ನಗಳ ಸಂಸ್ಕರಣೆ, ಪ್ಯಾಕಿಂಗ್‌ ಘಟಕವನ್ನು ಸ್ಥಾಪಿಸಲಾಗುವುದು. ₨1 ಕೋಟಿ ವೆಚ್ಚದಲ್ಲಿ ಘಟಕ ನಿರ್ಮಾಣವಾಗಲಿದೆ ಎಂದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.