ಸಾವಯವ ಕೃಷಿಗೆ ಆದ್ಯತೆ ನೀಡಿ: ಗುತ್ತೇದಾರ

7

ಸಾವಯವ ಕೃಷಿಗೆ ಆದ್ಯತೆ ನೀಡಿ: ಗುತ್ತೇದಾರ

Published:
Updated:

ಆಳಂದ: `ಅತಿಯಾದ ಗೊಬ್ಬರ ಮತ್ತು ಕೀಟನಾಶಕಗಳ ಬಳಕೆಯಿಂದ ಭೂಮಿಯು ಫಲವತ್ತತೆ ಕುಸಿದು ಇಳುವರಿ  ಕಡಿಮೆಯಾಗುತ್ತಿದೆ. ಆದ್ದರಿಂದ ರೈತರು ಹೆಚ್ಚಾಗಿ ಸಾವಯವ ಕೃಷಿಗೆ ಆದ್ಯತೆ ನೀಡಬೇಕು~ ಎಂದು ಶಾಸಕ ಸುಭಾಷ ಗುತ್ತೇದಾರ ಹೇಳಿದರು.ತಾಲ್ಲೂಕು ಕೃಷಿ ಇಲಾಖೆ ಮತ್ತು ಕೃಷಿ ಸಂಬಂಧಿತ ಇಲಾಖೆಗಳ ಆಶ್ರಯದಲ್ಲಿ ಪಟ್ಟಣದ ಎ. ವಿ. ಪಾಟೀಲ ಮಂಗಲ ಕಾರ್ಯಾಲಯದಲ್ಲಿ ಶುಕ್ರವಾರ ಆಯೋಜಿಸಿದ ಕೃಷಿ ಮಾಹಿತಿ ಮತ್ತು ಜಾಗೃತಿ ಆಂದೋಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಶರಣಪ್ಪ ಪಾಟೀಲ ಮಾತನಾಡಿ, `ಸರ್ಕಾರದಿಂದ ದೊರೆಯುತ್ತಿರುವ ವಿವಿಧ ಸೌಲಭ್ಯಗಳ ಲಾಭ ಪಡೆದು ರೈತರು ಕೃಷಿ ಅಭಿವೃದ್ಧಿ ಜೊತೆಗೆ ದೇಶದ ಅಭಿವೃದ್ಧಿಗೆ ಕಾರಣರಾಗಬೇಕು~ ಎಂದರು.

ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಸಿದ್ರಾಮಪ್ಪ ಪಾಟೀಲ ಧಂಗಾಪುರ, ಕೃಷಿ ವಿಜ್ಞಾನಿಗಳಾದ ಡಾ. ಮಂಜುನಾಥ ಪಾಟೀಲ, ಡಾ. ಡಿ.ಎಚ್.ಪಾಟೀಲ, ಸಹಾಯಕ ಕೃಷಿ ನಿರ್ದೇಶಕ ಶಶಾಂಕ ಆರ್. ಶಹಾ ಮಾತನಾಡಿದರು.ಇದಕ್ಕೂ ಮುನ್ನ ಕೃಷಿ ಇಲಾಖೆ ಕಚೇರಿಯಿಂದ ಎತ್ತಿನ ಬಂಡಿಯಲ್ಲಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಹಿಂಗಾರಿ ಬಿತ್ತನೆಗೆ ಅಗತ್ಯವಾದ ಬೀಜಗಳನ್ನು ಉಚಿತವಾಗಿ ವಿತರಿಸಲಾಯಿತು. ಸುವರ್ಣ ಭೂಮಿ ಯೋಜನೆಯಡಿ ಮಂಜೂರಾದ ಮೊದಲ ಕಂತಿನ ಹಣವನ್ನು ಫಲಾನುಭವಿಗಳಿಗೆ ವಿತರಿಸಲಾಯಿತು. ಕೃಷಿ ಮಾಹಿತಿ ಸಂಬಂಧಿತ ಪುಸ್ತಕಗಳನ್ನು ಬಿಡುಗಡೆ ಮಾಡಲಾಯಿತು. ತಾಲ್ಲೂಕಿನ ಸಾವಯವ ಕೃಷಿ ಮತ್ತು ಪ್ರಗತಿಪರ ಮಹಿಳಾ ಮತ್ತು ಕೃಷಿ ರೈತರನ್ನು ಪ್ರಶಸ್ತಿ ಪತ್ರ ನೀಡಿ ಸನ್ಮಾನಿಸಲಾಯಿತು.ಮಾಜಿ ಶಾಸಕ ಅಣ್ಣಾರಾವ ಪಾಟೀಲ, ಜಿ.ಪಂ. ಸದಸ್ಯೆ ಜಯಶ್ರೀ ಸಾವಳೇಶ್ವರ, ಪೂಜಾ ರಮೇಶ ಲೋಹಾರ, ಸಹಾಯಕ ಕೃಷಿ ಅಧಿಕಾರಿಗಳಾದ ಷಣ್ಮುಖಯ್ಯ ಸ್ವಾಮಿ, ಜಿ.ಆರ್. ಕೋಟೆ, ಸಿ.ಎಸ್.ರುದ್ರ, ಫಕ್ರೋದ್ದಿನ್ ಉಪಸ್ಥಿತರಿದ್ದರು. ಕಲಾವಿದ ಶಿವಶರಣಪ್ಪ ಪೂಜಾರಿ, ಮಲ್ಲಿಕಾರ್ಜುನ ವರ್ನಾಳೆ ರೈತ ಗೀತೆ ಹಾಡಿದರು. ಎಂ.ಎಸ್. ನಂದರ್ಗಿ ನಿರೂಪಿಸಿದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry