ಶುಕ್ರವಾರ, ಜೂಲೈ 3, 2020
29 °C

ಸಾವಯವ ಗೊಬ್ಬರ ಬಳಕೆಗೆ ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಾವಯವ ಗೊಬ್ಬರ ಬಳಕೆಗೆ ಸಲಹೆ

ಗದಗ: ರೈತರ ಅಭಿವೃದ್ಧಿಗಾಗಿ ಸರ್ಕಾರ ಸಾಕಷ್ಟು ಸವಲತ್ತುಗಳನ್ನು ನೀಡಿದೆ. ರೈತರು ಪ್ರಾಮಾಣಿಕವಾಗಿ ಅವುಗಳ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಚಂಬವ್ವ ಪಾಟೀಲ ಸಲಹೆ ನೀಡಿದರು.ತಾಲ್ಲೂಕಿನ ಲಕ್ಕುಂಡಿ ಗ್ರಾಮದಲ್ಲಿ  ಮುಂಗಾರು ಹಂಗಾಮಿಗೆ ರಿಯಾಯಿತಿ ದರದಲ್ಲಿ ಕೃಷಿ ಇಲಾಖೆ ವತಿಯಿಂದ ರೈತರಿಗೆ ಬೀಜ ವಿತರಣೆ ಇತ್ತೀಚೆಗೆ ನಡೆಯಿತು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ರೈತರು ಭೂಮಿಯ ಫಲವತ್ತತೆ ಕಾಪಾಡಿಕೊಳ್ಳಲು ಸಾವಯವ ಗೊಬ್ಬರ ಬಳಸಲು ಮುಂದಾಗಬೇಕು.ರಾಸಾಯನಿಕ ಗೊಬ್ಬರವನ್ನು ಸಂಪೂರ್ಣವಾಗಿ ಕೈಬಿಡಬೇಕು ಎಂದು ಅವರು ಹೇಳಿದರು. ಜಿಲ್ಲಾ ಪಂಚಾಯಿತಿ ಅನುದಾನದಲ್ಲಿ ರೈತರಿಗೆ ಅನುಕೂಲ ಕಲ್ಪಿಸುವುದಾಗಿ ಭರವಸೆ ನೀಡಿದರು.ಎಪಿಎಂಸಿ ಸದಸ್ಯ ಎಚ್.ಕೆ. ಪಾಟೀಲ ಮಾತನಾಡಿ, ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ದೊರಕಿಸಿ ಕೊಡಲು ಪ್ರಯತ್ನಿಸಲಾಗು ವುದು ಎಂದರು.ಜಂಟಿ ಕೃಷಿ ನಿರ್ದೇಶಕ ಎನ್.ವಿ. ಚಂದ್ರಶೇಖರ ಪ್ರಾಸ್ತಾವಿಕವಾಗಿ ಮಾತನಾಡಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗಂಗವ್ವ ಮಜ್ಜಿಗುಡ್ಡ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಅನಸೂಯಾ ಗುದಗಿ, ಸದಸ್ಯರಾದ ದಾನಪ್ಪ ಯಾವಗಲ್, ಶೇಖರಯ್ಯ ಗಂಧದ, ಬಿ.ಎಸ್. ಮೂಲಿಮನಿ, ಕರಬಸಪ್ಪ ಕರಿಯಲ್ಲಪ್ಪನವರ, ಕುಬೇರಪ್ಪ ಬಡಿಗೇರ, ಶಾಂತವ್ವ ನಂದಪ್ಪನವರ, ಶಾಂತಯ್ಯ ಗಂಧದ, ಶಿವಪುತ್ರಪ್ಪ ಬೂದಿಹಾಳ ಮತ್ತಿತರರು ಹಾಜರಿದ್ದರು.ಎಚ್.ಆರ್. ನಾಗರಾಜ ಸ್ವಾಗತಿಸಿ ದರು. ಕೆ.ಐ. ಕುರಗೋಡಿ ಕಾರ್ಯಕ್ರಮ ನಿರೂಪಿಸಿದರು. ಸಿ.ಪಿ. ಮೂಡಲತೋಟ ವಂದಿಸಿದರು.  

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.