ಗುರುವಾರ , ಆಗಸ್ಟ್ 6, 2020
24 °C

ಸಾವರಕರ್‌ಜನ್ಮದಿನ ಆಚರಣೆ 4ರಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜಮಖಂಡಿ: ವೀರ ಸಾವರಕರ್ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ನಗರದ ಬಸವ ಭನವದ ಸಮುದಾಯ ಭವನದಲ್ಲಿ ಜೂನ್ 4ರಂದು ಸಂಜೆ 5 ಗಂಟೆಗೆ ಆಯೋಜಿಸಲಾಗಿದೆ ಎಂದು ಸ್ವಾತಂತ್ರ್ಯವೀರ ಸಾವರಕರ್ ಪ್ರತಿಷ್ಠಾನ ಜಮಖಂಡಿಯ ಸಂಚಾಲಕ ಶೈಲೇಶ ಆಪ್ಟೆ ತಿಳಿಸಿದ್ದಾರೆ.ದೆಹಲಿ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಡಾ.ಹರೀಂದ್ರ ಶ್ರೀವಾಸ್ತವ ಮುಖ್ಯ ಭಾಷಣ ಮಾಡುವರು. ಗುಲ್ಬರ್ಗಾದ ಕಾಡಾ ಅಧ್ಯಕ್ಷ ಗಿರೀಶ ಮಟ್ಟೆಣ್ಣವರ ಅತಿಥಿಗಳಾಗಿ ಪಾಲ್ಗೊಳ್ಳುವರು.ಶಾಸಕ ಶ್ರೀಕಾಂತ ಕುಲಕರ್ಣಿ, ವಿಧಾನ ಪರಿಷತ್ ಸದಸ್ಯ ಜಿ.ಎಸ್. ನ್ಯಾಮಗೌಡ, ರಾಜ್ಯ ಜವಳಿ ನಿಗಮದ ಅಧ್ಯಕ್ಷ ಸಿದ್ದು ಸವದಿ, ಮಾಜಿ ಕೇಂದ್ರ ಸಚಿವ ಸಿದ್ದು ನ್ಯಾಮಗೌಡ, ಮಾಜಿ ಶಾಸಕ ಆರ್.ಎಂ. ಕಲೂತಿ, ಜಿ.ಪಂ. ಸದಸ್ಯ ಶ್ರೀಶೈಲ ದಳವಾಯಿ, ಜಿ.ಪಂ. ಮಾಜಿ ಉಪಾಧ್ಯಕ್ಷ ಸುಶೀಲಕುಮಾರ ಬೆಳಗಲಿ ಕಾರ್ಯಕ್ರಮದಲ್ಲಿ ಹಾಜರಿರುತ್ತಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.