ಶನಿವಾರ, ಮೇ 28, 2022
24 °C

ಸಾವಿರ ಗ್ರಾಮಕ್ಕೆ ಸುವರ್ಣ ಗ್ರಾಮ ಯೋಜನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಾವಿರ ಗ್ರಾಮಕ್ಕೆ ಸುವರ್ಣ ಗ್ರಾಮ ಯೋಜನೆ

ಕಾರವಾರ: ಸುವರ್ಣ ಗ್ರಾಮ ಯೋಜನೆ ಯಶಸ್ಸಿ ನಿಂದಾಗಿ ಇನ್ನಷ್ಟು ಗ್ರಾಮ ಪಂಚಾಯಿತಿಗಳನ್ನು ಈ ಯೋಜನೆಗೆ ಸೇರ್ಪಡೆ ಮಾಡಬೇಕು ಎನ್ನುವ ಒತ್ತಾಯ ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರಿಂದ ಕೇಳಿ ಬರುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಸಚಿವ ಜಗದೀಶ ಶೆಟ್ಟರ್ ಹೇಳಿದರು.ನಗರದ ಎಮ್.ಜಿ.ರಸ್ತೆಯಲ್ಲಿ ನಿರ್ಮಿಸಿರುವ ನೂತನ ಜಿಲ್ಲಾ ಪಂಚಾಯಿತಿ ಕಟ್ಟಡವನ್ನು ಬುಧವಾರ ಉದ್ಘಾಟಿಸಿ ಅವರು ಮಾತ ನಾಡಿದರು.ಈ ಬೇಡಿಕೆ ಬಂದಿರುವ ಹಿನ್ನೆಲೆಯಲ್ಲಿ ಒಂದುಸಾವಿರ ಗ್ರಾಮ ಪಂಚಾಯಿತಿಗಳನ್ನು ಸುವರ್ಣ ಗ್ರಾಮ ಯೋಜನೆಗೆ ಸೇರ್ಪಡೆಗೊಳಿಸಿ ಘೋಷಣೆ ಮಾಡಬೇಕು ಎಂದು ಮುಖ್ಯಮಂತ್ರಿ ಸದಾನಂದ ಗೌಡ ಅವರಿಗೆ ಮನವಿ ಮಾಡಿದ್ದೇನೆ ಎಂದರು.ಸುವರ್ಣಗ್ರಾಮ ಯೋಜನೆಯ ಮೊದಲ ನಾಲ್ಕುಹಂತದ ಕಾಮಗಾರಿಗಳ ಪೈಕಿ 1ಮತ್ತು 2ನೇ ಹಂತದ ಕಾಮಗಾರಿ ಮುಗಿದಿದೆ. 3ಮತ್ತು 4ನೇ ಹಂತದ ಕಾಮಗಾರಿ ನಡೆಯುತ್ತಿದೆ ಎಂದು ಸಚಿವರು ತಿಳಿಸಿದರು.ಗ್ರಾಮೀಣಭಾಗದ ರಸ್ತೆ ಸುಧಾರಣೆ ಆದರೆ ಆ ಭಾಗದ ಸಾಮಾಜಿಕ ಮತ್ತುಆರ್ಥಿಕ ಸ್ಥಿತಿ ಸುಧಾರಣೆ ಆಗಲಿದೆ. ಈ ನಿಟ್ಟಿನಲ್ಲಿ 4000 ಕಿಲೋ ಮೀಟರ್ ರಸ್ತೆ ಸುಧಾರಣೆಗಾಗಿ ರೂ. 1400 ಕೋಟಿ ಪ್ರಸ್ತಾವ ಕೇಂದ್ರಕ್ಕೆ ಕಳುಹಿ ಸಲಾಗಿದ್ದು, ಅದು ಪರಿಶೀಲನೆಯ ಹಂತದಲಿದೆ ಎಂದರು.ಮೂಲಭೂತ ಸೌಕರ್ಯಗಳನ್ನು ಹೆಚ್ಚಿಸಲು ತಾ.ಪಂ ಮತ್ತು ಜಿ.ಪಂ. ಅಧ್ಯಕ್ಷರಿಗೆ ನೀಡುತ್ತಿರುವ ಒಂದು ಕೋಟಿ ಅನುದಾನವನ್ನು ಎರಡು ಕೋಟಿಗೆ ಹೆಚ್ಚಿಸಲು ಪ್ರಯತ್ನ ಮಾಡಲಾಗುವುದು. ಗ್ರಾ.ಪಂ. ಅಧ್ಯಕ್ಷರಿಗೆ ಜನಸಂಖ್ಯೆ ಆಧಾರದ ಮೇಲೆ 9ರಿಂದ 12 ಲಕ್ಷದ ವರೆಗೆ ಅನುದಾನ ನೀಡುವ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಸಲಾಗುವುದು ಎಂದು ಶೆಟ್ಟರ್ ನುಡಿದರು.ಸಚಿವರಾದ ವಿಶ್ವೇಶ್ವರ ಹೆಗಡೆ ಕಾಗೇರಿ, ಆನಂದ ಅಸ್ನೋಟಿಕರ್, ಜಿ.ಪಂ. ಅಧ್ಯಕ್ಷೆ ಸುಮಾ ಲಮಾಣಿ, ಉಪಾಧ್ಯಕ್ಷ ಉದಯ ನಾಯ್ಕ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ.ಎಚ್.ಗೋಪಾಲಕೃಷ್ಣ ಗೌಡ ವೇದಿಕೆಯಲ್ಲಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.