ಸೋಮವಾರ, ಜೂನ್ 14, 2021
21 °C

ಸಾಹಿತಿಗಳು ಸರ್ಕಾರ ಅಡಿಯಾಳಾಗಬಾರದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಕವಿಗಳು, ವಿಮರ್ಶಕರು ಆಳುವ ವರ್ಗದ ಶಾಶ್ವತ ವಿರೋಧಿಗಳು ಎಂದು ಮೈಸೂರು ವಿಶ್ವವಿದ್ಯಾನಿಲಯದ ಪ್ರಸಾರಾಂಗ ನಿರ್ದೇಶಕ ಪ್ರೊ.ಸಿ.ನಾಗಣ್ಣ ಅಭಿಪ್ರಾಯಪಟ್ಟರು.ದೇಸಿರಂಗ ಸಾಂಸ್ಕೃತಿಕ ಸಂಸ್ಥೆ ನಗರದ ರಂಗಾಯಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಡಾ. ಸಿದ್ದಲಿಂಗಯ್ಯ ಅವರ ಕಥೆ ಆಧಾರಿತ `ಮತಾಂತರ~ ನಾಟಕ ಪ್ರದರ್ಶನದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.`ಸರ್ಕಾರವನ್ನು ವಿರೋಧಿಸುವ ಸಾಹಿತಿಗಳೇ ಆಳುವವರ ಅಡಿಯಾಳಾಗಿ ಕೆಲಸ ಮಾಡುತ್ತಾರೆ. ಲೋಕದ ನತದೃಷ್ಟರ ಪರ ದನಿ ಎತ್ತುವುದನ್ನು ಬಿಟ್ಟು ಸರ್ಕಾರಿ ಸೌಲಭ್ಯಗಳನ್ನು ಅನುಭವಿಸುತ್ತಾರೆ. ಹೀಗಾಗಿ ಅಂಥವ ರಿಂದ ಸಾಮಾಜಿಕ ಬದಲಾವಣೆಯನ್ನು ನಿರೀಕ್ಷೆ ಮಾಡುವುದು ಕಷ್ಟ. ಈ ಹಿನ್ನೆಲೆಯಲ್ಲಿ ಕವಿ ಡಾ.ಸಿದ್ದಲಿಂಗಯ್ಯ ಅವರು ಬರವಣಿಗೆಯನ್ನು ಮುಂದುವ ರಿಸಬೇಕು~ ಎಂದು ಸಲಹೆ ನೀಡಿದರು.`ಬಡವರು, ಕೆಳವರ್ಗದ ಜನತೆ ಸಮಾಜದಲ್ಲಿ ಘನತೆಯಿಂದ ಬಾಳಲು ಸಾಧ್ಯವಿಲ್ಲ ಎಂಬುದು ಹಲವು ಬಾರಿ ನಿರೂಪಿತವಾಗಿದೆ. ಹೀಗಾಗಿ ಸಮಾಜ ಈವರೆಗೂ ಬದಲಾವಣೆಯಾಗಿಲ್ಲ. ಸಾಮಾನ್ಯ ಜನರ ಮೇಲೆ ಮಹನೀಯರು ಪ್ರಭಾವ ಬೀರಿದಂತೆ ಕಾಣುತ್ತಿಲ್ಲ. ಇದರಿಂದ ಆರ್ಥಿಕ ಸಬಲೀಕರಣ, ಸಾಮಾಜಿಕ ಸದೃಢತೆಗೆ ಎಲ್ಲರೂ ಶ್ರಮಿಸಬೇಕು~ ಎಂದು ಹೇಳಿದರು.ಇದಕ್ಕೂ ಮುನ್ನ ರಂಗಕರ್ಮಿ ಡಾ.ನ.ರತ್ನ ಕಂಸಾಳೆ ನುಡಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ದರು. ಕೃಷ್ಣ ಜನಮನ ಪ್ರಾಸ್ತಾವಿಕ ವಾಗಿ ಮಾತನಾಡಿದರು. ಬಳಿಕ ದೇಸಿರಂಗ ಸಾಂಸ್ಕೃತಿಕ ಸಂಸ್ಥೆಯ ಕಲಾವಿದರು ನಾಟಕ ಪ್ರದರ್ಶಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.